ಹಿರಿಯ ಸಾಹಿತಿ ಪ್ರೊ. ಕೆ.ಎಸ್. ನಾರಾಯಣಾಚಾರ್ಯ ಅವರ ಕೃತಿ. ಸೆಕ್ಯುಲರಿಸಂ: ಅಂದು ಇಂದು. ಜಾತ್ಯತೀತತೆ ಎಂದರೆ ಸ್ವದೇಶಿ ಸಂಪ್ರದಾಯವನ್ನು ನಿರ್ಲಕ್ಷಿಸಿ ಪರರ ಸಂಸ್ಕೃತಿಯನ್ನು ಆಚಾರ ವಿಚಾರಗಳನ್ನು ಅಳವಡಿಸಿಕೊಳ್ಳುವುದಲ್ಲ. ನಮ್ಮತನವನ್ನು ಕಾಯ್ದುಕೊಳ್ಳುವುದರಲ್ಲಿ ಹಾಗೂ ಇತರರನ್ನು ಗೌರವಿಸುವುದರಲ್ಲಿ ಜಾತ್ಯತೀತತೆ ಇದೆ. ಇಂತಹ ಮಹತ್ವದ ಸಂಗತರಿಗಳ ಚಿಂತನೆಗಳಿರುವ ಲೇಖನಗಳ ಸಂಗ್ರಹ ಕೃತಿ ಇದು.
ಹಿರಿಯ ವಿದ್ವಾಂಸ ಹಾಗೂ ಪ್ರವಚನಕಾರರೂ ಆಗಿರುವ ಪ್ರೊ. ಕೆ.ಎಸ್. ನಾರಾಯಣಾಚಾರ್ಯರು ಮೂಲತಃ ಬೆಂಗಳೂರು ಜಿಲ್ಲೆಯ (ಈಗಿನ ಕನಕಪುರ) ಕನಕನಹಳ್ಳಿಯವರು. ತಂದೆ ಕೆ.ಎನ್. ಶ್ರೀನಿವಾಸ ದೇಶಿಕಾಚಾರ್. ತಾಯಿ ರಂಗನಾಯಕಮ್ಮ. ವೈದಿಕ ವಿದ್ವಾಂಸರ ಕುಟುಂಬ ಇವರದು.ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎಸ್.ಸಿ. ಪದವೀಧರರು. ನಂತರ ಬಿ.ಎ. ಆನರ್ಸ್ ಮಾಡಿ, ಆಧುನಿಕ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಡಬ್ಲ್ಯು.ಬಿ. ಯೇಟ್ಸ್ ಮತ್ತು ಟಿ.ಎಸ್. ಎಲಿಯೆಟ್ ಅವರ ಕಾವ್ಯದ ಮೇಲೆ ಭಾರತೀಯ ಸಂಸ್ಕೃತಿಯ ಕುರಿತು ಅಧ್ಯಯನ ನಡೆಸಿ ಪಿಎಚ್.ಡಿ. ಪಡೆದರು. ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ, ಆ ಕಾಲೇಜಿನ ಪ್ರಾಂಶುಪಾಲರಾಗಿ ನಿವೃತ್ತರಾದರು. ಸದ್ಯ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ವೇದಗಳು, ರಾಮಾಯಣ, ...
READ MORE