ಲೇಖಕ ಎ.ಎನ್. ಪ್ರಸನ್ನ ಅವರು ಬರೆದ ವೈಜ್ನಾನಿಕ ಲೇಖನಗಳ ಸಂಗ್ರಹ ಕೃತಿ-ಸೀಮಾತೀತ. ನಮ್ಮ ಸುತ್ತಮುತ್ತ ಜರುಗುವ ಸಣ್ಣ ಸಣ್ಣ ಸಂಗತಿಗಳಿಗೆ ಹೇಗೆ ವೈಜ್ಞಾನಿಕ ಕಾರಣ ಹಾಗೂ ಪರಿಣಾಮಗಳಿರುತ್ತವೆ ಎಂಬುದನ್ನು ಅತ್ಯಂತ ಸರಳವಾಗಿ ವಿವರಿಸಲಾಗಿದೆ. ಮನುಷ್ಯನ ರಕ್ತದ ವಿಶೇಷತೆ, ಭೂಮಿಯ ವಯಸ್ಸು, ಬೆಳಕಿನ ಹಲವು ಬಗೆ ಇತ್ಯಾದಿ ವಿಷಯಗಳ ಕುರಿತು ಸರಳ ವಿವರಣೆ ಒಳಗೊಂಡ ಕೃತಿ.
ಎ. ಎನ್. ಪ್ರಸನ್ನ ಅವರು ದಾವಣಗೆರೆಯಲ್ಲಿ ಎಂಜಿನಿಯರಿಂಗ್ ಪದವಿಯ ನಂತರ ಕೆ.ಪಿ.ಟಿ.ಸಿ.ಎಲ್.ನಲ್ಲಿ ಕಾರ್ಯನಿರ್ವಹಿಸಿ ನಿವೃತ್ತರು, ಸಾಹಿತ್ಯ, ನಾಟಕ ಮತ್ತು ದೃಶ್ಯ ಮಾಧ್ಯಮದಲ್ಲಿ ಆಸಕ್ತಿ. ಉಳಿದವರು (ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ), ರಥಸಪ್ತಮಿ(ಬಿ. ಎಚ್.ಶ್ರೀಧರ ಪ್ರಶಸ್ತಿ), ಪ್ರತಿಫಲನ (ಮಾಸ್ತಿ ಕಥಾ ಪುರಸ್ಕಾರ) ಸೇರಿದಂತೆ ಐದು ಕಥಾ ಸಂಕಲನಗಳು ಮತ್ತು ಆಯ್ದ ಕಥೆಗಳ ಸಂಕಲನ ಪ್ರಕಟವಾಗಿವೆ. ನೂರು ವರ್ಷದ ಏಕಾಂತ (ಗಾಬ್ರಿಯಲ್ ಗಾರ್ಸಿಯಾ ಮಾರ್ಕೆಜ್‌ನ 'ಒನ್ ಹಂಡ್ರೆಡ್ ಇಯರ್ಸ್ ಆಫ್ ಸಾಲಿಟೂಡ್' ಕಾದಂಬರಿಯ ಅನುವಾದ : ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಪ್ರಶಸ್ತಿ), ಮೂರನೆ ದಡ (ಪ್ರಪಂಚದ ಮಾಂತ್ರಿಕ ವಾಸ್ತವತೆಯ ಕಥೆಗಳು), ಒಂದಾನೊಂದು ...
READ MORE