ಭಾಷೆ, ಪ್ರಭುತ್ವ ಹಾಗೂ ಸಮಾಜದ ನಂಟಿನ ಕುರಿತು ಲೇಖಕರು ಬರೆದಿರುವ ಲೇಖನಗಳ ಸಂಕಲನ ಸೇನೆಯಿಲ್ಲದ ಕದನ. ಇಲ್ಲಿರುವ ಹಲವು ಲೇಖನಗಳು ಪ್ರಜಾವಾಣಿ, ವಿಜಯವಾಣಿ, ಉದಯವಾಣಿ, ಹೊಸತು, ಸಂವಾದ ಮುಂತಾದ ಪತ್ರಿಕೆಯಲ್ಲಿ ಪ್ರಕಟಗೊಂಡವಾಗಿವೆ. ಮಕ್ಕಳನ್ನು ಕನ್ನಡದಲ್ಲೇ ಓದಿಸಬೇಕು ಯಾಕೆಂದರೆ ಮಾತೃ ಭಾಷೆಯಲ್ಲಿ ಶಿಕ್ಷಣ ಪಡೆಯುವುದು ತುಂಬಾ ಸುಲಭ. ಕನ್ನಡದಲ್ಲಿ ಓದಿಸಿದರೆ ಸ್ಪರ್ಧಾತ್ಮಕ ಪ್ರಪಂಚದಲ್ಲಿ ತೊಂದರೆಯಾಗುತ್ತದೆ ಎನ್ನುವುದು ತಪ್ಪು ಕಲ್ಪನೆ. ಹೀಗೆ ಹಲವು ಪ್ರಮಖ ವಿಷಯಗಳ ಬಗ್ಗೆ ಮಾಹಿತಿಯನ್ನುಲೇಖಕರು ಈ ಕೃತಿಯಲ್ಲಿ ನೀಡಿದ್ದಾರೆ. ಕನ್ನಡದ ಬಗ್ಗೆ ಕಾಳಜಿಯನ್ನು ಈ ಕೃತಿಯು ಮೂಡಿಸುತ್ತದೆ.
ಕವಿ, ಲೇಖಕ, ಚಿಂತಕರಾದ ರಂಗನಾಥ ಕಂಟನಕುಂಟೆಯವರು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಾಥಮಿಕ ಶಿಕ್ಷಣವನ್ನು ಕಂಟನಕುಂಟೆಯಲ್ಲಿ ಪೂರ್ಣಗೊಳಿಸಿದ ರಂಗನಾಥ್ ಅವರು ಸರ್ಕಾರಿ ಪದವಿ ಪೂರ್ಣ ಕಾಲೇಜು ದೊಡ್ಡಬಳ್ಳಾಪುರದಲ್ಲಿ ಪಿಯುಸಿ ಮುಗಿಸಿ, ಶ್ರೀಕೊಂಗಾಡಿಯಪ್ಪ ಕಾಲೇಜಿನಲ್ಲಿ ಐಚ್ಛಿಕ ಕನ್ನಡದಲ್ಲಿ ಪದವಿ ಪಡೆದಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕನ್ನಡದಲ್ಲಿ ಎಂ.ಎ ಪದವಿ ಪಡೆದ ಅವರು ಆನಂತರದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಜನಭಾಷೆ ಮತ್ತು ಪ್ರಭುತ್ವ ಭಾಷೆಗಳ ನಡುವಿನ ಸಂಘರ್ಷದ ನೆಲೆಗಳು ಎಂಬ ವಿಷಯದಡಿ ತಮ್ಮ ಪಿಎಚ್.ಡಿ ಮುಗಿಸಿದ್ದಾರೆ. ಕಳೆದ ಇಪತ್ತು ವರ್ಷಗಳಿಂದ ಅಧ್ಯಾಪಕರಾಗಿ ...
READ MORE