ಖ್ಯಾತ ಕವಿ ಹಾಗೂ ಕಥೆಗಾರ ಜಯಂತ ಕಾಯ್ಕಿಣಿ ಅವರ ಕಥಾ ಸಂಕಲನ-ಶಬ್ದ ತೀರ. ಅಲೆಮಾರಿ ಬದುಕಿನ ಚಿತ್ರಣಗಳು, ಪಾತ್ರಗಳಲ್ಲಿಯ ಮನೋವ್ಯಾಪಾರ, ಸನ್ನಿವೇಶಗಳ ಸೃಷ್ಟಿಯಲ್ಲಿ ಸೃಜನಶೀಲತೆ, ಮಹಾನಗರಗಳ ನರಕ ಜೀವನ, ಮಗುವಿನ ಮುಗ್ಧತೆ, ಸುಂದರ ಕನಸುಗಳು, ಸಹಜ ಕೌತುಕತೆ ಹೀಗೆ ಕಥಾ ಹಂದರವಿರುವ ಕಥೆಗಳು ತಮ್ಮ ಆಪ್ತ ಶೈಲಿಯ ಮೂಲಕ ಓದುಗರನ್ನು ಸೆಳೆಯುತ್ತವೆ.
ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಜನಿಸಿದ ಜಯಂತ ಅವರ ತಂದೆ ಗೌರೀಶ ಕಾಯ್ಕಿಣಿ ಹೆಸರಾಂತ ವಿಚಾರವಾದಿ ಲೇಖಕ. ಆಧುನಿಕ ಬದುಕಿನ ಆತಂಕಗಳನ್ನು ಕತೆಯಾಗಿಸುವ ಜಯಂತ ಕಾಯ್ಕಿಣಿ ಅವರು ಕನ್ನಡದ ಪ್ರಮುಖ ಕತೆಗಾರರಲ್ಲಿ ಒಬ್ಬರು. ’ಕತೆಗಾರ’ ಎಂಬ ವಿಶೇಷಣ ಇದೆಯಾದರೂ ಅವರೊಬ್ಬ ಪ್ರಮುಖ ಕವಿ ಕೂಡ ಹೌದು. ಪ್ರಬಂಧ, ಅಂಕಣ ಬರಹ, ಚಲನಚಿತ್ರ ಸಂಭಾಷಣೆ ಮತ್ತು ಗೀತರಚನೆ ಹೀಗೆ ಹಲವು ಪ್ರಕಾರಗಳಲ್ಲಿ ಹೆಜ್ಜೆಗುರುತು ಮೂಡಿಸಿದ್ದಾರೆ. ’ಭಾವನಾ’ ಮಾಸಿಕ ಪತ್ರಿಕೆಯ ಸಂಪಾದಕರಾಗಿದ್ದ ಜಯಂತ ಅವರು ಈಟಿವಿ ವಾಹಿನಿಗಾಗಿ ’ನಮಸ್ಕಾರ’, ಬೇಂದ್ರೆ, ಕುವೆಂಪು, ಕಾರಂತ ನಮನ ಸರಣಿಯ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದಾರೆ. ರಂಗದಿಂದೊಂದಿಷ್ಟು ದೂರ, ಕೋಟಿತೀರ್ಥ, ಶ್ರಾವಣ ಮಧ್ಯಾಹ್ನ, ...
READ MORE