ವಿ. ಸೀತಾರಾಮಯ್ಯ ಅವರ ಕೃತಿ ಶಾಸ್ತ್ರಸಾಹಿತ್ಯ. ಈ ಯೋಜನೆಯ ಹೆಸರೇ ಸೂಚಿಸುವಂತೆ, ಇದು ಸಾಮಾನ್ಯರಿಗಾಗಿ ಬರೆದ ಸಾಹಿತ್ಯ ಚರಿತ್ರೆ. ಸಾಹಿತ್ಯ ಚರಿತ್ರೆಯನ್ನು ಕುರಿತು ಇತ್ತೀಚೆಗೆ ಕರ್ನಾಟಕದಲ್ಲಿ ನಡೆಯುತ್ತಿರುವ ಕೆಲಸಗಳೆಲ್ಲ ಬಹುಮಟ್ಟಿಗೆ ವಿದ್ವಾಂಸರನ್ನೋ, ಸಾಹಿತ್ಯವನ್ನು ವಿಶೇಷವಾದ ರೀತಿಯಲ್ಲಿ ಅಧ್ಯಯನ ಮಾಡುವವರನ್ನೋ ಉದ್ದೇಶಿಸಿದವುಗಳು. ಆದರೆ ಈ ಪ್ರೌಢ ಪರಿಣತವರ್ಗದ ಆಚೆ ಇರುವ ಸಾಹಿತ್ಯಾಸಕ್ತರಾದ ಸಾಮಾನ್ಯರಿಗೆ ಕನ್ನಡ ಸಾಹಿತ್ಯ ಚರಿತ್ರೆಯನ್ನು ಮುಟ್ಟಿಸುವ ಪ್ರಯತ್ನಗಳು ಅಷ್ಟಾಗಿ ನಡೆದಿಲ್ಲವೆಂದೇ ಹೇಳಬೇಕು. ಈ ದಿಕ್ಕಿನಲ್ಲಿ ಈಗ ಸಿದ್ದವಾಗಿರುವ ಈ ಹತ್ತು ಕಿರು ಸಂಪುಟಗಳು ಮೊದಲ ಪ್ರಯತ್ನವೆನ್ನಬಹುದು.
ರಾಘವ ಕಾವ್ಯನಾಮದ ಮೂಲಕ ಪರಿಚಿತರಾಗಿರುವ ಎಂ.ವಿ. ಸೀತಾರಾಮಯ್ಯ ಜನಿಸಿದ್ದು ಮೈಸೂರಿನಲ್ಲಿ. ಮಕ್ಕಳಿಗಾಗಿ ಬರೆದ 'ಹೂವನು ಮಾರುತ ಹೂವಾಡಗಿತ್ತಿ' ಹಾಡು ಕನ್ನಡ ಭಾಷಾ ಪಠ್ಯಪುಸ್ತಕದಲ್ಲಿತ್ತು. ಕನ್ನಡ ಅಧ್ಯಾಪಕರಾಗಿದ್ದ ಇವರು ಸಾಹಿತ್ಯ ಕ್ಷೇತ್ರದಲ್ಲಿಯೂ ಮನೆಮಾತಾಗಿದ್ದರು. ಕನ್ನಡ ಸಾಹಿತ್ಯಕ್ಕೆ ಇವರ ಕೊಡುಗೆಗಳೆಂದರೆ ಹಕ್ಕಿಹಾಡು, ರಾಗ, ಅಶೋಕ ಚಕ್ರ (ಕವನ ಸಂಗ್ರಹಗಳು), ರಾಘವ, ಕವನ ಕೋಶ, ಆ ಚಿತ್ರಗಳು, ಹಕ್ಕಿ ಹಾಡು, ರತಿದೇವಿ ಮತ್ತು ಇತರ ಕಥೆಗಳು, ಬಿಸಿಲು ಬೆಳದಿಂಗಳು, ನಿಲ್ದಾಣಗಳ ನಡುವೆ (ಕಥಾ ಸಂಕಲನಗಳು), ಭಾಗ್ಯಲಕ್ಷ್ಮಿ, ನಂಜಿನ ಸವಿ, ಜೀವನದ ಜೊತೆಗಾರ (ಕಾದಂಬರಿಗಳು), ತೆರೆಮರೆಯ ಚಿತ್ರಗಳು, ತೊಟ್ಟಿಲು ತೂಗದ ಕೈ (ನಾಟಕಗಳು), ...
READ MORE