ಜಾನಪದಶ್ರೀ ಪ್ರಶಸ್ತಿ ಪುರಸ್ಕೃತ ಶತಾಯುಷಿ ಲಾವಣಿ ರಚನಕಾರ ಸೋಮಲಿಂಗಪ್ಪ ದೊಡವಾಡ ಅವರ ಬದುಕು-ಬರೆಹ-ಸಾಧನೆಗಳ ಕುರಿತು ಸಮಗ್ರ ಮಾಹಿತಿ ನೀಡುವ ಕೃತಿ ಇದು. ಮನೋರಂಜನೆಯ ಸಾಧನವಾದ ಲಾವಣಿ, ಗೀಗೀ ಪದಗಳನ್ನು ರಾಷ್ಟ್ರೀಯ ವಿಚಾರಗಳ ಪ್ರಚಾರ-ಪ್ರಸಾರಕ್ಕೆ ಸಮರ್ಥವಾಗಿ ಬಳಸಿಕೊಂಡವರು ಸೋಮಲಿಂಗಪ್ಪ. ರಾಷ್ಟ್ರೀಯವದಿ ಲಾವಣಿಕಾರರೆಂದು ಗುರುತಿಸಿಕೊಂಡರು.
ಡಾ. ಸಿ.ಕೆ. ನಾವಲಗಿ ಎಂತಲೇ ಪರಿಚಿತರಾಗಿರುವ ಲೇಖಕ ಚೆನ್ನಬಸಪ್ಪ ಕಲ್ಲಪ್ಪ ನಾವಲಗಿ ಅವರು 1956 ಆಗಸ್ಟ್ 1ರಂದು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಬಸರಕೋಡ ಗ್ರಾಮದಲ್ಲಿ ಜನಿಸಿದರು. ಕನ್ನಡ ಜಾನಪದ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಇವರು ಕನ್ನಡ ಅಧ್ಯಾಪಕರಾಗಿ ವೃತ್ತಿ ಆರಂಭಿಸಿ, ಪಾಚಾರ್ಯರಾಗಿ ನಿವೃತ್ತಿ ಹೊಂದಿದ್ದಾರೆ. ಇವರು ರಚಿಸಿದ ಪ್ರಮುಖ ಕೃತಿಗಳೆಂದರೆ ಜಾನಪದ ಸ್ಪಂದನ, ಬೇಂದ್ರೆಯವರ ಕಾವ್ಯದ ಮೇಲೆ ಜಾನಪದ ಪ್ರಭಾವ, ಗಾದೆಗಳಲ್ಲಿ ಹಾಸ್ಯ, ಶರಣ ವಿಚಾರವಾಹಿನಿ, ವಚನ ಸಾಹಿತ್ಯ ಮತ್ತು ಜಾನಪದ, ದಿಕ್ಸೂಚಿ, ವಚನ ಸಾಹಿತ್ಯದಲ್ಲಿ ಜಾನಪದ ಅಂಶಗಳು, ಗ್ರಾಮೀಣ ಗ್ರಹಿಕೆ, ಕಥನ ಕವನ ಸಂಚಯ, ...
READ MORE