'ಶೀತಲ ಕೋಳಿ' ಕಾದಂಬರಿಯನ್ನು ಲೇಖಕ ಸುದರ್ಶನ ದೇಸಾಯಿ ಅವರು ರಚಿಸಿದ್ದಾರೆ. ಈ ಕೃತಿಯು ಸಾಮಾಜಿಕ ಕಾದಂಬರಿಯಾಗಿದೆ. ಸಂಜೆವಾಣಿಯ ಚಂದನ ಪತ್ರಿಕೆಯಲ್ಲಿ ಪ್ರಕಟವಾದ ಧಾರವಾಹಿಯ ಪುಸ್ತಕ ರೂಪವೇ ಶೀತಲಕೋಳಿ ಕಾದಂಬರಿ. ಪೊಲೀಸ್ ತನಿಖೆಯೊಂದಿಗೆ ಆರಂಭವಾಗುವ ಕಾದಂಬರಿಯು ಕೌಟುಂಬಿಕ ಹಿನ್ನಲೆಯೊಂದಿಗೆ ಸಾಗುತ್ತದೆ. ಸದಾ ನ್ಯಾಯಮಾರ್ಗದಲ್ಲೆ ಸಾಗುವ ಪೊಲೀಸ್ ಅಧಿಕಾರಿ ಅನುಭವಿಸುವ ನೋವು, ಹಿಂಸೆ ಮತ್ತು ಕೊನೆಗೆ ಅತ ನ್ಯಾಯವನ್ನು ಉಳಿಸಿಕೊಡುವ ಬಗೆಯ ಸುತ್ತ ಕಥೆಯು ಸಾಗುತ್ತದೆ. ಇಲ್ಲಿ ಮುಖ್ಯವಾಗಿ ತ್ರಿವರ್ಣ ಧ್ವಜದ ಮಹತ್ವವನ್ನು ಕಾದಂಬರಿಯುದ್ದಕ್ಕೂ ಸಾರಲಾಗಿದೆ.
ಲೇಖಕ ಸುದರ್ಶನ ದೇಸಾಯಿ ಅವರು ಮೂಲತಃ ಧಾರವಾಡದವರು. ತಂದೆ- ಕೃಷ್ಣರಾವ ರಾಮಾರಾವ ದೇಸಾಯಿ. ತಾಯಿ- ರಾಧಾಬಾಯಿ. ವಿದ್ಯಾಭ್ಯಾಸವನ್ನು ಧಾರವಾಡದ ಸರಕಾರಿ ಕನ್ನಡ ಪ್ರಾಥಮಿಕ ಶಾಲೆ, ಮಾಳಮಡ್ಡಿಯ ಕೆ.ಇ.ಬೋರ್ಡ್ ಹೈಸ್ಕೂಲಿನಲ್ಲಿ ಪೂರ್ಣಗೊಳಿಸಿದರು. ಬಾಸೆಲ್ ಮಿಷನ್ ಟ್ರೈನಿಂಗ್ ಕಾಲೇಜಿನಿಂದ ಟಿ.ಸಿ.ಎಚ್. ತರಬೇತಿ ಪಡೆದು ಧಾರವಾಡದ ಗುಲಗುಂಜಿ ಕೊಪ್ಪದ ಸರಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ದುಡಿದರು.1977ರಿಂದ ಸಾಹಿತ್ಯ ರಚನೆಯಲ್ಲಿ ತೊಡಗಿಕೊಂಡರು. ಪ್ರಜಾಮತ ವಾರಪತ್ರಿಕೆಯ ರಾಜ್ಯಮಟ್ಟದ ಕಥಾಸ್ಪರ್ಧೆಯಲ್ಲಿ ತಮ್ಮ ಸಪ್ತಪದಿ ಕತೆಗೆ ಮೂರನೆ ಬಹುಮಾನ ಪಡೆದರು. ಆನಂತರದಲ್ಲಿ ಸುಮಾರು 60ಕ್ಕೂ ಹೆಚ್ಚು ಸಣ್ಣಕತೆಗಳನ್ನು ರಚಿಸಿದರು. ಅವರ ಕಥೆಗಳಾದ ಅಪರಿಚಿತ, ಕರಿನಾಯಿ, ನೆಲುವಿಗೆ ಹಾರದ ಬೆಕ್ಕು ಹಾಗೂ ...
READ MORE