ಷೇಕ್ಸ್ ಪಿಯರ್ ಹೇಳಿದ ಕಥೆಗಳು

Author : ಎಲ್.ಎಸ್. ಶೇಷಗಿರಿರಾವ್

Pages 234

₹ 160.00




Year of Publication: 2014
Published by: ವಸಂತ ಪ್ರಕಾಶನ
Address: ನಂ 360, 10ನೇ ಬಿ- ಮುಖ್ಯರಸ್ತೆ, 3ನೇ ಅಡ್ಡರಸ್ತೆ, ಜಯನಗರ, ಬೆಂಗಳೂರು-11

Synopsys

‘ಷೇಕ್ಸ್ ಪಿಯರ್ ಹೇಳಿದ ಕಥೆಗಳು’ ಹಲವು ನಾಟಕಗಳ ಕಥಾಸಾರ - ಚಾರ್ಲ್ಸ್ ಮತ್ತು ಮೇರಿ ಲ್ಯಾಂಬ್ ಅವರ ಕೃತಿಯನ್ನು ಲೇಖಕ ಪ್ರೊ. ಎಲ್.ಎಸ್. ಶೇಷಗಿರಿರಾವ್ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಜಗತ್ತಿನ ಶ್ರೇಷ್ಠ ಬರಹಗಾರರಲ್ಲಿ ಷೇಕ್ಸ್ ಪಿಯರ್ ಒಬ್ಬರು. ವಿಶ್ವವಿದ್ಯಾಲಯಕ್ಕೆ ಕಾಲಿಡದ ಈತ ತನ್ನ ಪ್ರತಿಭೆಯಿಂದ ಇಂದೂ ಜಗತ್ತು ಬೆರಗಾಗುವಂತೆ ಮಾನವ ಸ್ವಭಾವದ ಅನಾವರಣ ಮಾಡಿದ. ಮಾನವನ ಬದುಕನ್ನು ವಿಶಿಷ್ಟ ಒಳನೋಟಗಳಿಂದ ಪುನರ್ ಸೃಷ್ಟಿ ಮಾಡಿದ. ಅವರ ಹಲವು ಕಥಾಸಾರವನ್ನು ಈ ಕೃತಿಯಲ್ಲಿ ನೀಡಲಾಗಿದೆ.

About the Author

ಎಲ್.ಎಸ್. ಶೇಷಗಿರಿರಾವ್
(16 February 1925 - 20 December 2019)

ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಎಲ್.ಎಸ್. ಶೇಷಗಿರಿರಾವ್ ಅವರು ಪ್ರಬುದ್ಧ ವಿಮರ್ಶಕರೆಂದೇ ಖ್ಯಾತರು. ತಂದೆ ಸ್ವಾಮಿರಾವ್- ತಾಯಿ ಕಮಲಾಬಾಯಿ. 1925ರ ಫೆಬ್ರುವರಿ 16ರಂದು ಜನಿಸಿದರು. ಬೆಂಗಳೂರು ಮೈಸೂರುಗಳಲ್ಲಿ ವಿದ್ಯಾಭ್ಯಾಸ ಮಾಡಿದ ಇವರು ನಾಗಪುರ ವಿ.ವಿ.ಯಲ್ಲಿ ಇಂಗ್ಲಿಷ್ ಎಂ.ಎ. ಪದವೀಧರರಾದರು. ಕಾಲೇಜು ಶಿಕ್ಷಣ ಇಲಾಖೆಗೆ ಸೇರಿ ಕೋಲಾರ, ಮಡಿಕೇರಿ, ಬೆಂಗಳೂರುಗಳಲ್ಲಿ ಕಾಲೇಜು ಅಧ್ಯಾಪಕರಾಗಿ ಕೊನೆಯಲ್ಲಿ ಕೆಲವುಕಾಲ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದರು. 1947-50ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾಗಿ ಬಿ.ಎಂ.ಶ್ರೀ ಸ್ಮಾರಕ ಪ್ರತಿಷ್ಠಾನದ ಅಧ್ಯಕ್ಷರಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಥಮ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ...

READ MORE

Related Books