ಶೀಘ್ರಗತಿಯಲ್ಲಿ ಪ್ರಗತಿಶೀಲರಾಗಿ ಗುರುತಿಸಿಕೊಂಡ ಶಿವೇಶ್ವರ ದೊಡ್ಡಮನಿ ಅವರ ಲೇಖನಗಳನ್ನು ಸಂಪಾದಿಸಿ ಡಾ. ಶ್ಯಾಮಸುಂದರ ಬಿದರಕುಂದಿ ಯವರು ಇಲ್ಲಿ ಕೊಟ್ಟಿದ್ದಾರೆ. ಈ ಕೃತಿಯಲ್ಲಿ ಒಟ್ಟು ಶಿವೇಶ್ವರ ಬರೆದಿರುವ ಕಥೆ, ಲೇಖನಗಳನ್ನು ಇಲ್ಲಿ ಅಂತರ್ಗತಗೊಳಿಸಲಾಗಿದೆ. ಉತ್ತರ ಕರ್ನಾಟಕದಲ್ಲಿ ಹುಟ್ಟಿ ಬೆಳೆದ ಇವರು ಪ್ರಗತಿ ಶೀಲ ಸಾಹಿತ್ಯ ಚಳುವವಳಿಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡವರು. ಕೇವಲ ಪ್ರಗತಿಶೀಲರಾಗಿ ಮಾತ್ರ ಗುರುತಿಸಿಕೊಳ್ಳದೆ ಜನಪರ ಹೋರಾಟಗಳಲ್ಲಿ ಕೂಡ ಮುಂಚೂಣಿಯಲ್ಲಿದ್ದವರು. ಇವರ ಬದುಕನ್ನು, ಜೀವನ ಸಾಧನೆಯನ್ನು, ಹಲವು ಲೇಖನಗಳನ್ನು ಲೇಖಕರು ಈ ಕೃತಿಯಲ್ಲಿ ಕಟ್ಟಿಕೊಟ್ಟಿದ್ದಾರೆ.
ಕವಿ, ವಿಮರ್ಶಕ, ನಿವೃತ್ತ ಪ್ರಾಧ್ಯಾಪಕರಾಗಿರುವ ಡಾ. ಶ್ಯಾಮಸುಂದರ ಬಿದರಕುಂದಿ ಅವರು ಸದ್ಯ ಹುಬ್ಬಳ್ಳಿ ನಿವಾಸಿಯಾಗಿದ್ದಾರೆ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ., ಪಿಎಚ್.ಡಿ. ಪಡೆದಿರುವ ಅವರು ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ನ ಅಧ್ಯಕ್ಷರಾಗಿದ್ದರು. ಕೃತಿಗಳು: ಅಜ್ಜಗಾವಲು, ಅಲ್ಲಮ ಪ್ರಭುವಾದ, ಬರುವುದೇನುಂಟೊಮ್ಮೆ, ತಲೆ ಎತ್ತಿ ಶರಣು (ಕವನ ಸಂಕಲನ), ಕೃತಿ ನೋಟ, ಅಚ್ಚು ಕಟ್ಟು, ನೆಲೆಗಟ್ಟು, ಪ್ರಸಂಗೋಚಿತ (ವಿಮರ್ಶೆ), ನವ್ಯಮಾರ್ಗದ ಕಾದಂಬರಿಗಳು (ಪಿಎಚ್.ಡಿ. ಮಹಾಪ್ರಬಂಧ), ಗಂಧಕೊರಡು, ಪ್ರಬಂಧಪ್ರಪಂಚ, ಸ್ವಾತಂತ್ರ್ಯದ ಸವಿನೀರು, ಕರ್ಕಿಯವರ ಸಮಗ್ರ ಸಾಹಿತ್ಯ ( ಸಂಪಾದಿತ), ಗರೂಡ ಶ್ರೀಪಾದರಾವ; ಶಂಕರ ಮೊಕಾಶಿ ಪುಣೇಕರ; ಫ.ಶಿ. ಭಾಂಡಗೆ (ಇತರೆ) ...
READ MORE