ಈ ಕಾದಂಬರಿಯಲ್ಲಿ ವೃದ್ಧಾಪ್ಯದ ಬದುಕನ್ನು ಸುಂದರ, ಸುಮಧುರಗೊಳಿಸಿಕೊಂಡ ಗೃಹಿಣಿಯೊಬ್ಬಳ ಕಥೆ ಇದೆ. ಮಾನವನ ಬದುಕಿನ ಸಂಜೆ ಎಂದರೆ ವೃದ್ಧಾಪ್ಯ. ಈ ಸಂಜೆಗಳು ಶ್ರಾವಣಮಾಸದ ಸಂಜೆಯಂತಿರಬೇಕೆಂಬ ಆಶಯ ಹೊತ್ತ ಕಥಾನಕ.
ಕನ್ನಡ ಕಾದಂಬರಿಗಾರ್ತಿ ಹೆಚ್. ಜಿ.ರಾಧಾದೇವಿ ಅವರು ತಮ್ಮ ವೃತ್ತಿ ಜೀವನದಲ್ಲಿ 30ಕ್ಕೂ ಹೆಚ್ಚು ಕಾದಂಬರಿಗಳನ್ನು ರಚಿಸಿದ್ದಾರೆ. ಹುಟ್ಟಿದ್ದು ಕೋಲಾರ ಜಿಲ್ಲೆಯ ಶಿಡ್ಲಘಟ್ಟದಲ್ಲಿ. ತಂದೆ ಗೋಪಿನಾಥಾಚಾರ್. ಪ್ರಾಥಮಿಕ ಶಾಲಾ ಶಿಕ್ಷಕರು.ಕೋಲಾರದಲ್ಲಿ ಸರಕಾರಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ.-ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದರು. ಮುಂದಿನ ಓದಿಗೆ ತಡೆಯುಂಟಾಗಿ, ಮನೆ ಪಾಠ ಆರಂಭಿಸಿದರು.ಈ ಅನುಭವವೇ ಶಾಲಾ ಶಿಕ್ಷಕಿಯಾಗುವ ಅವಕಾಶಕ್ಕೆ ದಾರಿಯಾಯಿತು. ದುಡಿಯುವ ಮಹಿಳಾ ವರ್ಗ ಕುರಿತ ಅನೆಕ ಸಮಸ್ಯೆಗಳನ್ನು ತಮ್ಮ ಕತೆ ಕಾದಂಬರಿಗಳ ಮೂಲಕ ಬೆಳಕು ಚೆಲ್ಲಿದ್ದು, ಈ ಬಗ್ಗೆ ಹಲವಾರು ಲೇಖನಗಳನ್ನು ಸಹ ಬರೆದಿದ್ದಾರೆ. ‘ಅನುರಾಗ ಅರಳಿತು, ಒಲವಿನ ಸುಧೆ ಒಲಿದು ಬಂದ ಅಪ್ಸರೆ, ಕತ್ತಲಲ್ಲಿ ಕಂಡ ಮಿಂಚು, ...
READ MORE