ದೇರಾಜೆ ಸೀತಾರಾಮಯ್ಯ
(17 November 1914 - 05 October 1984)
ಹಿರಿಯ ಚಿಂತಕ-ಲೇಖಕ-ಪ್ರವಚನಕಾರ-ಯಕ್ಷಗಾನ ಕಲಾವಿದ ದೇರಾಜೆ ಸೀತಾರಾಮಯ್ಯ ಅವರು ದ.ಕ. ಜಿಲ್ಲೆಯ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದವರು. ಜಮೀನುದಾರರು. ತಂದೆ ಮಂಗಲ್ಪಾಡಿ ಕೃಷ್ಣಯ್ಯ, ತಾಯಿ ಸುಬ್ಬಮ್ಮ. ಯಕ್ತಗಾನ ಕಲಾವಿದರ ಮನೆತನ. ಪ್ರಾಥಮಿಕ ಶಾಲೆಯ ಗುರು ಕೊಟ್ಟೆಕಾಯಿ ನಾರಾಯಣ ರಾಯರ ಕುಮಾರವ್ಯಾಸ ಕುರಿತ ಪಾಠದಿಂದ ಅಭಿನಯ, ಸಾಹಿತ್ಯಾಸಕ್ತಿ ಮೂಡಿತು. ಯಕ್ಷಗಾನ, ತಾಳಮದ್ದಳೆ, ನಾಟಕ, ರಂಗಭೂಮಿಯ ಬಗ್ಗೆ ಸಂಶೋಧನೆ - ವಿಮರ್ಶೆಗಳು ಹೀಗೆ ವೈವಿಧ್ಯಮಯ ಸಾಹಿತ್ಯ ರಚಿಸಿದ್ದು ಇವರ ವೈಶಿಷ್ಟ್ಯ. ಬೆಳ್ಳಾರೆ ಗ್ರಾ.ಪಂ ಅಧ್ಯಕ್ಷರಾಗಿದ್ದರು. ಪುತ್ತೂರು ತಾಲೂಕು ಮಾರುಕಟ್ಟೆ ಸೊಸೈಟಿ ಅಧ್ಯಕ್ಷರು, ದಕ್ಷಿಣ ಕನ್ನಡ ಕೃಷಿಕರ ಮಾರಾಟ ಸಹಕಾರ ಸಂಘದ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ಕೃತಿಗಳು: ಭೀಷ್ಮಾರ್ಜುನ ...
READ MORE