‘ಶ್ರೀಪತಿಯ ಕಥೆಗಳು’ ಕೃಷ್ಣಶಾಸ್ತ್ರೀ ಎ.ಆರ್ ಅವರ ಕತಾಸಂಕಲನ. ಈ ಕೃತಿಯಲ್ಲಿನ ಕತೆಗಳು ಪ್ರಬುದ್ಧ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾಗಿದ್ದವು. ಇಲ್ಲಿ ಬದುಕಿನ ಅನುಭವಗಳೇ ಕತೆಗಳಾಗಿ ಜೀವತಳೆದಂತಿವೆ. ಓದುಗರನ್ನು ತನ್ನ ತೀವ್ರವಾದ ಶೈಲಿಯಿಂದಲೇ ಹಿಡಿದಿಡುವ ಕತೆಗಳು ನೋವಿನ ತೀಕ್ಷ್ಣತೆಯನ್ನೂ ನವಿರುಗೊಳಿಸುವಂತಿವೆ.
ಮಹಾಭಾರತವನ್ನು ಸರಳಗನ್ನಡದಲ್ಲಿ ಹೇಳುವ ವಚನ ಭಾರತದ ಮೂಲಕ ಕನ್ನಡ ಸಾಹಿತ್ಯದಲ್ಲಿ ಚಿರಪರಿಚಿತರಿರುವ ಎ.ಆರ್. ಕೃಷ್ಣಶಾಸ್ತ್ರಿಗಳು ಪ್ರಬುದ್ಧ ಕರ್ನಾಟಕ ಪತ್ರಿಕೆಯ ಸ್ಥಾಪಕರಾಗಿ, ಸಂಪಾದಕರಾಗಿ ನೀಡಿದ ಕೊಡುಗೆ ಅಮೂಲ್ಯ. 1890ರ ಫೆಬ್ರುವರಿ 12ರಂದು ಮೈಸೂರಿನಲ್ಲಿ ಜನಿಸಿದರು. ತಂದೆ ಅಂಬಳೆ ರಾಮಕೃಷ್ಣಶಾಸ್ತ್ರಿ ತಾಯಿ ವೆಂಕಮ್ಮ. ತಂದೆಯಿಂದ ಸಂಸ್ಕೃತ ವ್ಯಾಸಂಗ ಮಾಡಿದ ಶಾಸ್ತ್ರಿಗಳು ವೆಸ್ಲಿಯನ್ ಪ್ರೌಢಶಾಲೆಯಲ್ಲಿ ಶಿಕ್ಷಣ ಮುಗಿದ ಮೇಲೆ ಬಿ.ಎ. ಪದವಿ (1913) ಮತ್ತು ಮದರಾಸಿನಲ್ಲಿ ಕನ್ನಡ ಎಂ.ಎ. (1915) ಪದವಿ ಪಡೆದರು. ಪ್ರಾರಂಭದಲ್ಲಿ ಡೆಪ್ಯೂಟಿ ಕಮೀಷನರ್ ಆಫೀಸಿನಲ್ಲಿ ಅನಂತರ ಓರಿಯಂಟಲ್ ಲೈಬ್ರರಿಯಲ್ಲಿ ಕೆಲಸ ಮಾಡಿದ ಅವರು ನಂತರ 1916ರಲ್ಲಿ ಸೆಂಟ್ರಲ್ ...
READ MORE