ಅಂತಾರಾಷ್ಟ್ರೀಯ ನ್ಯಾಯಶಾಸ್ತ್ರಜ್ಞ ಮತ್ತು ಭಾರತ ಮತ್ತು ಬರ್ಮಾ ದೇಶಗಳ ಸಂವಿಧಾನದ ಮೂಲ ಕರಡನ್ನು ರಚಿಸಿದ ಹಿರಿಯ ಐಸಿಎಸ್ ಅಧಿಕಾರಿ ಸರ್ ಬೆನಗಲ್ ನರಸಿಂಗ ರಾವ್ ಅವರು ಬದುಕಿನ ಸಾಧನೆ ಕುರಿತು ವಿವರಿಸುವ ಕೃತಿಯನ್ನು ಲೇಖಕ ಶಶಿಧರ ಹಾಲಾಡಿ ಅವರು ರಚಿಸಿದ್ದಾರೆ.
ಶಶಿಧರ ಹಾಲಾಡಿ ಅವರು ಲೇಖಕರು. ವಿಶ್ವವಾಣಿ ಪತ್ರಿಕೆಯ ಪುರವಣಿ ವಿಭಾಗದ ಮುಖ್ಯ ಉಪಸಂಪಾದಕರು. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಾಲಾಡಿಯವರು. ಮೈಸೂರು ವಿ.ವಿ.ಯಿಂದ ಎಂ.ಎ. (ಕನ್ನಡ) ಚಿನ್ನದ ಪದಕದೊಂದಿಗೆ ಮೊದಲ ರ್ಯಾಂಕ್ ಪಡೆದಿದ್ದು, ಸಣ್ಣ ಕಥೆ, ಪ್ರವಾಸ ಕಥನ, ಕವನ, ನುಡಿಚಿತ್ರ, ಅಂಕಣ ಬರಹ ಮತ್ತು ಲೇಖನಗಳನ್ನು ಬರೆದಿದ್ದಾರೆ. ಶಿವಮೊಗ್ಗದ ನಾವಿಕ ದಿನಪತ್ರಿಕೆಯಲ್ಲಿ 12 ವರ್ಷ ಕಾಲ ಅಂಕಣಕಾರರು. ಪರಿಸರ , ಪಕ್ಷಿವೀಕ್ಷಣೆ, ಚಾರಣ (ಹಿಮಾಲಯದಲ್ಲಿ ಚಾರಣ ನಡೆಸಿದ ಅನುಭವ ಛಾಯಾಗ್ರಹಣ (ರಾಜ್ಯ ಮಟ್ಟದ ಲ್ಯಾಂಡ್ಸ್ಕೇಪ್ ಛಾಯಾಚಿತ್ರ ಸ್ಪರ್ಧೆಯಲ್ಲಿ ಮೂರನೆಯ ಬಹುಮಾನ), ಅಂಕಣ ಬರಹ, ಸಣ್ಣ ಕಥೆ ರಚನೆ ಇವರ ಆಸಕ್ತಿಯ ಕ್ಷೇತ್ರಗಳು. ಕೃತಿಗಳು: ನ್ಯಾಯಾಶಾಸ್ತ್ರಜ್ಞ ಸರ್ ಬೆನಗಲ್ ನರಸಿಂಗ ರಾವ್ ಕುರಿತು ಜೀವನ ...
READ MORE