ಸಿಸ್ತಿನ ಶಿವಪ್ಪ ನಾಯಕ

Author : ನಾ. ಡಿಸೋಜ

Pages 244

₹ 250.00




Year of Publication: 2022
Published by: ಗೀತಾಂಜಲಿ ಪುಸ್ತಕ ಪ್ರಕಾಶನ
Address: ಶಿವಮೊಗ್ಗ
Phone: 9449886390

Synopsys

ಖ್ಯಾತ ಸಾಹಿತಿ ಡಾ. ನಾ. ಡಿಸೋಜ ಅವರ ಐತಿಹಾಸಿಕ ಕಾದಂಬರಿ-ಸಿಸ್ತಿನ ಶಿವಪ್ಪ ನಾಯಕ. ಕೆಳದಿಯ ಅರಸ ಶಿವಪ್ಪನಾಯಕ. ಕಂದಾಯ ವ್ಯವಸ್ಥೆಯನ್ನು ಶಿಸ್ತಿನಿಂದ ಜಾರಿಗೊಳಿಸಿದ ಖ್ಯಾತಿ ಈತನದು. ಇಲ್ಲಿಯ ಉತ್ಪನ್ನಗಳಾದ ಮೆಣಸು, ಅಡಿಕೆ, ತಂಬಾಕು, ಶ್ರೀಗಂಧ, ಏಲಕ್ಕಿ, ಜೀರಿಗೆ, ಇಂಗು, ಸಾಸಿವೆ, ತೆಂಗು, ಅರಿಸಿನ ಮುಂತಾದ ನೈಸರ್ಗಿಕ ವಸ್ತುಗಳ ಜೊತೆಗೆ ರೇಷ್ಮೆ, ಬೆಲ್ಲ, ಹತ್ತಿಯಬಟ್ಟೆ ಇತ್ಯಾದಿ ನಿಡಿದಾದ ಕರವಳಿಯ ಬಂದರಿನ ಮೂಲಕ ಮಾರಾಟ ಮಾಡಲಾಗುತ್ತಿತ್ತು. ಇದಕ್ಕೆ ಬದಲಾಗಿ ಅರಬ್ಬೀ ಕುದುರೆಗಳು, ಅನೇಕ ಬೆಲೆಬಾಳುವ ವಿದೇಶಿ ಪದಾರ್ಥಗಳು ಆಮದಾಗುತ್ತಿದ್ದವು. ಇದರೊಂದಿಗೆ ಪಶ್ಚಿಮ ಸಮುದ್ರದ ಮೂಲಕ ವಿದೇಶಗಳಿಗೆ ಹೋಗಬೇಕಿದ್ದ ಎಲ್ಲ ಸರಕುಗಳೂ ಇಲ್ಲಿಯ ಸುಂಕದಕಟ್ಟೆಯ ಮೂಲಕವೇ ಹಾದು ಹೋಗಬೇಕಾಗಿದ್ದಿದ್ದರಿಂದ ಅಪಾರವಾದ ಸುಂಕವು ಸಂಗ್ರಹವಾಗುತ್ತಿತ್ತು. ಇಂತಹ ಐತಿಹಾಸಿಕ ಸಂಗತಿಗಳ ವಿವರಗಳನ್ನು ಒಳಗೊಂಡ ಕಾದಂಬರಿ ಇದು.

About the Author

ನಾ. ಡಿಸೋಜ

ನಾ ಡಿಸೋಜ ಬರಹಗಾರರು, ಲೋಕೋಪಯೋಗಿ ಇಲಾಖೆಯಲ್ಲಿ ನೌಕರರಾಗಿ ನಿವೃತ್ತಿ ಹೊಂದಿದವರು. ಸುಮಾರು ಐದು ದಶಕಗಳಿಂದಲೂ ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ಕೃತಿ ರಚಿಸುತ್ತ ಬಂದಿರುವ ನಾರ್ಬರ್ಟ್ ಡಿಸೋಜ ಅವರು ಹುಟ್ಟಿದ್ದು ಜೂನ್ 6, 1937 ರಲ್ಲಿ.  ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಜನಿಸಿದರು. ತಂದೆ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾಗಿದ್ದ ಎಫ್.ಪಿ. ಡಿಸೋಜ, ತಾಯಿ ರೂಪೀನಾ ಡಿಸೋಜ. ಪರಿಸರ ಕಾಳಜಿಯುಳ್ಳ ಮಹತ್ವದ ಕಥೆಗಾರರೆನಿಸಿದ್ದು ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ. ಪ್ರಾರಂಭದ ದಿನಗಳಲ್ಲಿ 'ಪ್ರಪಂಚ' ಪತ್ರಿಕೆಗೆ ಕಥೆಗಳನ್ನು ಬರೆಯುತ್ತಿದ್ದರು. ಡಿಸೋಜರ ಮೊದಲ ಕಾದಂಬರಿ ‘ಬಂಜೆ ...

READ MORE

Related Books