‘ಸ್ನೇಹವೆಂಬ ಕಡಲು’ ಡಾ. ವಿಜಯಕುಮಾರ ಕಟಗಿಹಳ್ಳಿಮಠ ಅವರಿಗೆ ಅರ್ಪಿಸಿದ ಸ್ನೇಹಾಂಕಿತ ಕೃತಿ. ಡಾ. ಗುರುಪಾದ ಮರಿಗುದ್ದಿ, ಡಾ. ಬಾಳಾಸಾಹೇಬ ಲೋಕಾಪುರ ಮತ್ತು ಡಾ. ಬಸವರಾಜ ಡೋಣೂರ ಅವರು ಈ ಕೃತಿಯ ಸಂಪಾದಕರು.
ನೋಡ ನೋಡುತ್ತಲೆ ವಿಜಯಕುಮಾರ ಒಬ್ಬ ಬಹುದೊಡ್ಡ ಸಂಘಟಕರಾಗಿ ರೂಪಗೊಂಡರು. ಸಂಸ್ಕೃತಿಯ ಮೇಲಿನ ಪ್ರೀತಿಯಿಂದ ಆ ಕ್ಷೇತ್ರವನ್ನು ತಾವಾಗಿಯೇ ಅಯ್ದುಕೊಂಡರು. ಸ್ವಂತ ಹಣ ಖರ್ಚುಮಾಡಿಕೊಂಡರು, ಸಮಯ ಹಾಳುಮಾಡಿಕೊಂಡರು. ಆದರೆ ಬಾಗಲಕೋಟೆಯಲ್ಲಿ ಸಾಹಿತ್ಯಕ ವಾತಾವರಣ ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಅವರ ಬದುಕು ಬರಹದ ಕುರಿತಾಗಿ ಸ್ನೇಹಿತರು ಸಂಪಾದಿಸಿರುವ ಕೃತಿ ಇದು.
ಡಾ ಬಸವರಾಜ್ ಪಿ. ಡೋಣೂರು ಬಸವನಬಾಗೇವಾಡಿ ತಾಲೂಕಿನ ಸಾತಿಹಾಳ ಗ್ರಾಮದವರು. 1969ರ ಜುಲೈ 26 ರಂದು ಜನಿಸಿದರು. ಇಂಗ್ಲಿಷ್ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾಗಿ ಕೇಂದ್ರೀಯ ವಿಶ್ವವಿದ್ಯಾಲಯ, ಕಲಬುರಗಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ’ಹಾಪ್ಕಿನ್ಸ್ ಮತ್ತು ಬಸವಣ್ಣ’ ವಿಷಯದ ಬಗ್ಗೆ ತುಲನಾತ್ಮಕ ಅಧ್ಯಯನ ನಡೆಸಿದ್ದಾರೆ. ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರಾಗಿ, ಸ್ಕೂಲ್ ಆಫ್ ಹ್ಯುಮ್ಯಾನಿಟೀಸ್ ಅಂಡ್ ಲ್ಯಾಂಗ್ವೇಜಸ್ ವಿಭಾಗದ ಡೀನ್ ಆಗಿ ಸೇವೆ ಸಲ್ಲಿಸಿದ್ದಾರೆ. ಯುಜಿಸಿ ಸಂಶೋಧನಾ ಯೋಜನೆಯಡಿ ಜಾಗತೀಕರಣದ ಸನ್ನಿವೇಶದಲ್ಲಿ ಕರ್ನಾಟಕದ ಜಾನಪದ ನಾಟಕಗಳ ಸಂಗ್ರಹ, ಅನುವಾದ ಮತ್ತು ವಿಶ್ಲೇಷಣೆ ಮಾಡಿದ್ದು, ಹತ್ತು ಹಲವು ಕೃತಿಗಳನ್ನು ಬರೆದಿದ್ದಾರೆ. “ಕನ್ನಡ ನಾಟಕ ಮತ್ತು ವಾಸ್ತವಿಕತೆ” ಎಂಬ ...
READ MORE