‘ತಾಜಮಹಲ್’' ಕೃತಿಯು ವಿಶ್ವೇಶ್ವರ ಭಟ್ ಅವರ ಸಂಪಾದಿತ ಕತಾಸಂಕಲನ. ವಿಜಯ ಕರ್ನಾಟಕ ಮತ್ತು ಅಂಕಿತ ಪುಸ್ತಕ ಏರ್ಪಡಿಸಿದ್ದ ಯುಗಾದಿ ಕಥಾ ಸ್ಪರ್ಧೆ-2004 ರಲ್ಲಿ ಬಹುಮಾನ ಮತ್ತು ಮೆಚ್ಚುಗೆ ಪಡೆದ ಕತೆಗಳ ಸಂಕಲನವಿದು. ವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಇಲ್ಲಿಯ ಕಥೆಗಳು ಓದುಗರ ಗಮನ ಸೆಳೆಯುತ್ತವೆ.
ವಿಶ್ವೇಶ್ವರ ಭಟ್ ಅವರು ಉತ್ತರಕನ್ನಡ ಜಿಲ್ಲೆಯ ಕುಮಟಾದ ಮೂರೂರಿನವರು. ಓದಿದ್ದು ಎಂ.ಎಸ್ಸಿ. ಹಾಗೂ ಎಂ.ಎ. ನಾಲ್ಕು ಚಿನ್ನದ ಪದಕ ವಿಜೇತರು, ಇಂಗ್ಲೆಂಡಿನಲ್ಲಿ ಪತ್ರಿಕೋದ್ಯಮದಲ್ಲಿ ಉನ್ನತ ವ್ಯಾಸಂಗ, ಸಂಯುಕ್ತ ಕರ್ನಾಟಕ, ಕನ್ನಡಪ್ರಭದಲ್ಲಿ ಉಪಸಂಪಾದಕರಾಗಿ ವೃತ್ತಿ ಜೀವನ ಆರಂಭ, ವಿಜಯ ಕರ್ನಾಟಕ, ಕನ್ನಡ ಪ್ರಭ ಹಾಗೂ ಸುವರ್ಣ ನ್ಯೂಸ್ ಚಾನಲ್‌ನ ಪ್ರಧಾನ ಸಂಪಾದಕ, ಏಷಿಯನ್ ಕಾಲೇಜ್ ಆಫ್ ಜರ್ನಲಿಸಮ್‌ನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್, ಕೇಂದ್ರ ಪ್ರವಾಸೋದ್ಯಮ ಹಾಗೂ ಸಂಸ್ಕೃತಿ ಖಾತೆ ಸಚಿವರಿಗೆ ವಿಶೇಷ ಕರ್ತವ್ಯ ಅಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಸದ್ಯ, “ವಿಶ್ವವಾಣಿ' ದಿನಪತ್ರಿಕೆಯ ಪ್ರಧಾನ ಸಂಪಾದಕರು. 'ನೂರೆಂಟು ವಿಶ್ವ, 'ಇದೇ ಅಂತರಂಗ ಸುದ್ದಿ' ...
READ MORE