ಅಮೆರಿಕದಲ್ಲಿದ್ದುಕೊಂಡು ಕನ್ನಡ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿರುವ ನಾಗ ಐತಾಳ ಅವರ ಕಾದಂಬರಿ ತಲೆಮಾರ ಸೆಲೆ. ಈ ಕಾದಂಬರಿ ವೈದ್ಯವಿಜ್ಞಾನದಲ್ಲಿ ನಡೆಯುವ ಸಂಶೋಧನೆಯಾಧಾರಿತ ವಸ್ತು ವಿಷಯದ ಮೇಲೆ ಕಟ್ಟಿಕೊಟ್ಟಿದ್ದಾರೆ ಲೇಖಕರು. ಸಂಶೋಧನೆಯಲ್ಲಿ ತೊಡಗಿಸಿಕೊಂಡಿರುವ ವಿಜ್ಞಾನಿಗಳ ನಡುವೆ ಸಂಶೋಧನೆಯ ಕನಸು, ಸವಾಲುಗಳು ಮುಂತಾದವುಗಳ ಕುರಿತು ಈ ಕಾದಂಬರಿಯಲ್ಲಿ ಚರ್ಚಿಸಲಾಗಿದೆ.
ಅಹಿತಾನಲ ಎಂಬ ಕಾವ್ಯನಾಮದಿಂದ ಬರೆಯುವ ವಿಜ್ಞಾನಿ ನಾಗ ಐತಾಳ ಅವರು ಜನಿಸಿದ್ದು 1932ರ ಅಕ್ಟೋಬರ್ 5ರಂದು. ಮೂಲತಃ ಉಡುಪಿ ಜಿಲ್ಲೆಯ ಕೋಟದವರಾದ ಅವರು ಸದ್ಯ ಕ್ಯಾಲಿಫೋರ್ನಿಯಾದ ಅರ್‍ಕಾಡಿಯಾದ ನಿವಾಸಿ ಆಗಿರುವ ಐತಾಳರು ಆರಂಭಿಕ ಶಿಕ್ಷಣವನ್ನು ಬೆಂಗಳೂರಿನ ಆರ್ಯ ವಿದ್ಯಾಶಾಲೆಯಲ್ಲಿಯೂ ಪದವಿ ಶಿಕ್ಷಣವನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದರು. ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿಯೂ ಅವರು ಅಧ್ಯಯನ ಮಾಡಿದ್ದಾರೆ. ಭಾರತದಲ್ಲಿ ಪಿಎಚ್.ಡಿ. ಪದವಿ ಪಡೆದ ನಂತರ ಬಯೋಕೆಮಿಸ್ಟ್ರಿಯಲ್ಲಿ ಹೆಚ್ಚಿನ ಅಧ್ಯಯನ ನಡೆಸಲು ಕೆನಡಾಕ್ಕೆ ಹೋದರು. ಅದಾದ ಮೇಲೆ ಅಮೆರಿಕೆಗೆ ಹೋದ ಅವರು 1975ರಿಂದ 2001ರ ವರೆಗೆ ಶಿಕಾಗೋ ವಿಶ್ವವಿದ್ಯಾಲಯದಲ್ಲಿ ಸಂಶೋಧನ ಪ್ರಾಧ್ಯಾಪಕರಾಗಿ ...
READ MORE