ಲೇಖಕ ಎಂ. ಆರ್ ದತ್ತಾತ್ರಿ ಅವರ ಕಾದಂಬರಿ ’ತಾರಾಬಾಯಿಯ ಪತ್ರ’. ತಾರಾಬಾಯಿಯು ವಿಕ್ರಮನ ಅಪ್ಪನ ಪ್ರೇಯಸಿ. ಅವಳು ಬರೆದ ಎರಡು ಪತ್ರದಲ್ಲಿ, ದೇವತೆ, ದೇವಿ ಎಂದೆಲ್ಲ ಬರೆದು, ಹೊಡೆದು ಹಾಕಿ, ಅಕ್ಕ ಎಂಬ ಸಂಬೋಧನೆಯೇ ಉಳಿಯುತ್ತದೆ. ಇವು ಏನೆಲ್ಲ ಭಾವಗಳನ್ನು ಹೇಳುತ್ತವೆ? ಏಕಾಂತದೊಳಗಿನ ಲೋಕಾಂತ, ಮೌನದೊಳಗಣ ಮಾತು, ಸಂವಾದದೊಳಗಿನ ಮೌನವೇ ಕಥಾನಕವಾಗಿದೆ ಇಲ್ಲಿ.
ರಂಜನಿಗೆ ಇವನ ಕರೆ ಕೇಳಿತೆ? ಗಂಗಾ ತನ್ನ ಗಾಂಭೀರ್ಯದಿಂದಾಚೆ ಬಂದು ಮತ್ತೆ ಇವರಿಬ್ಬರೂ ಒಂದೇ ಪರಿಧಿಯಲ್ಲಿ ಬರುವರೆ? ರಂಜನಿಯನ್ನು ಕನವರಿಸುತ್ತಲೇ ಗಂಗೆಗೆ ಹಪಹಪಿಸುವ ವಿಕ್ರಮ ಆಯ್ಕೆ ಮಾಡಿಕೊಳ್ಳುವುದು ಯಾರನ್ನು? ಯಾವ ಅಂತಃಕರುಣೆಯ ಕರೆ ವಿಕ್ರಮನೊಳಗಿನ ಪ್ರೀತಿಯನ್ನು ಮತ್ತೆ ಸೋಕುತ್ತಲೇ ಆವರಿಸಿಕೊಳ್ಳುತ್ತದೆ? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಕೃತಿಯಲ್ಲಿದೆ.
ಕಾದಂಬರಿಕಾರ, ಕವಿ, ಅಂಕಣಕಾರ, ಮತ್ತು ಅನುವಾದಕರಾಗಿ ಎಂ ಆರ್ ದತ್ತಾತ್ರಿ ಯವರು ಸಾಹಿತ್ಯ ರಚನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಮೂಲದ ಊರು ಚಿಕ್ಕಮಗಳೂರು. ಮೈಸೂರು ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ನಲ್ಲಿ ಇಂಜಿನಿಯ ರಿಂಗ್ ಪದವಿ ಪಡೆದು ಕೆಜಿಎಫ್, ಪುಣೆ, ಸ್ಯಾನ್ ಫ್ರಾನ್ಸಿಸ್ಕೋ ಮತ್ತು ಲಾಸ್ ಏಂಜಲಿಸ್ ನಗರಗಳಲ್ಲಿ ವೃತ್ತಿ ಜೀವನ ನಡೆಸಿ ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಅನೇಕ ಸಾಧನೆಗಳ ಕೀರ್ತಿ ದತ್ತಾತ್ರಿಯವರದ್ದಾಗಿದೆ. ಇಆರ್ಪಿ ಕ್ಲೌಡ್ ಟೆಕ್ನಾಲಜಿ ಕ್ಷೇತ್ರದಲ್ಲಿ ಸಂಪನ್ಮೂಲವ್ಯಕ್ತಿಯಾಗಿ ಅನೇಕ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಕೆಲಸ ಮಾಡಿದ ಅನುಭವವು ಅವರದ್ದು. ಅಮೆರಿಕ ಮತ್ತು ಭಾರತದ ಅನೇಕ ...
READ MORE