ಈ ಸಂಕಲನದಲ್ಲಿ ವಿದ್ಯಾರ್ಥಿಗಳು, ಅಧ್ಯಾಪಕರು ಸೇರಿದಂತೆ ಒಟ್ಟು 20 ಕವಿಗಳ ಕವನಗಳಿವೆ. ತಮ್ಮ ಜೀವನಾನುಭವನದ ಸಂಗತಿಗಳನ್ನು ಇಲ್ಲಿ ಕವಿತೆಯಾಗಿಸಿದ್ದಾರೆ. ಸ್ತ್ರೀ ಮತ್ತು ಪುರುಷ ಸಂವೇದನೆಗಳು ಇಲ್ಲಿ ಒಂದೆಡೆ ಸಿಗುವುದು ವಿಶೇಷ.
ರೇಣುಕಾ ಕೋಡಗುಂಟಿ ಅವರು ಮೂಲತಃ ರಾಯಚೂರು ಜಿಲ್ಲೆಯ ಮಸ್ಕಿಯವರು. ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ತಂದೆ ಅಯ್ಯಪ್ಪ ಕೋಡಗುಂಟಿ, ತಾಯಿ ಶಾಂತಮ್ಮ ಕೋಡಗುಂಟಿ, ರೇಣುಕಾ ಕೋಡಗುಂಟಿಯವರು ವಿದ್ಯಾಭ್ಯಾಸ ಎಂ.ಎ, ಎಂ.ಫಿಲ್, ಗೃಹಿಣಿ. ಸಾಹಿತ್ಯ, ಸಂಶೋಧನೆಯಲ್ಲಿ ಅಪಾರ ಆಸಕ್ತಿ. ‘ಕೃತಿ ದೀವಿಗೆ ಟ್ರಸ್ಟ್, ನಡೆಸುತ್ತಿದ್ದಾರೆ. ಕನ್ನಡೇತರರಿಗೆ ಕನ್ನಡವನ್ನು ಕಲಿಸುವ ಕೆಲಸ ಮಾಡುತ್ತಿದ್ದಾರೆ. ಕೃತಿಗಳು: ಬಳಪದ ಚೂರು(ಕವನ ಸಂಕಲನ-2011), ‘ನಮ್ಮ ಕನ್ನಾಡ ಪ್ರೇಮದ ಜೋತಿ (2011-ರಾಯಚೂರು ಜಿಲ್ಲೆಯ ಕಸಬಾ ಲಿಂಗಸೂಗೂರಿನ ಅಂಪವ್ವ ಪೂಜಾರಿ ಅವರು ಹಾಡಿರುವ ಜನಪದ ಹಾಡುಗಳ ಸಂಗ್ರಹ), ಅದೇ ಗಾಯಕರು ಹಾಡಿರುವ ‘ಇಜಬೂಪನ ಪದ’ (2019- ಎನ್ನುವ ಜನಪದ ಖಂಡಕಾವ್ಯ), ‘ಭಾಷಾವಿಜ್ಞಾನ ಸಂಶೋಧನೆ ಇಂದು’ (ಸಂಶೋಧನಾ ಪ್ರಬಂಧಗಳ ಸಂಪಾದನೆ-2011), ಕರ್ನಾಟಕದಲ್ಲಿ ಶವಸಂಸ್ಕಾರ (ಸಂಶೋಧನಾತ್ಮಕ ...
READ MORE