ಕನ್ನಡದ ಗದ್ಯಲೇಖಕ ಕೆ.ಪಿ. ಪೂರ್ಣಚಂದ್ರತೇಜಸ್ವಿ. ಅವರ ವಿವಿಧ ಕೃತಿಗಳನ್ನು, ಬದುಕನ್ನು ಕುರಿತಂತೆ ವಿವಿಧ ಲೇಖಕರು/ವಿಮರ್ಶಕರು ಬರೆದಿರುವ ಲೇಖನಗಳನ್ನು ಸಂಕಲಿತ ರೂಪ ಇದಾಗಿದೆ. ಲೇಖನಗಳ ಜೊತೆಗೆ 2002ರಿಂದ 2012ರ ನಡುವೆ, ನಡೆದ ವಿವಿಧ ಸೆಮಿನಾರುಗಳಲ್ಲಿ ಮಂಡಿತವಾದ ತೇಜಸ್ವಿ ಅವರಕುರಿತಾದ ಲೇಖನಗಳನ್ನು ಇಲ್ಲಿ ಸೇರಿಸಲಾಗಿದೆ.
ವೃತ್ತಿಯಿಂದ ಗ್ರಂಥಪಾಲಕರಾಗಿರುವ ಡಾ. ಬಿ.ಆರ್. ಸತ್ಯನಾರಾಯಣ ಅವರು ಪ್ರವೃತ್ತಿಯಿಂದ ಸಂಶೋಧಕ- ಲೇಖಕರೂ ಹೌದು. ಕೃಷಿಯಲ್ಲಿ ಆಸಕ್ತರಾಗಿರುವ ಸತ್ಯನಾರಾಯಣ ಅವರು ಹಳ್ಳಿ-ನಗರಗಳ ನಡುವೆ ಓಡಾಡಿದ ಅನುಭವದ ಹಿನ್ನೆಲೆಯಲ್ಲಿ ’ವೈತರಣೀ ದಡದಲ್ಲಿ (ಕವನ ಸಂಕಲನ) ಮತ್ತು ಮುಡಿ (ಕಥಾ ಸಂಕಲನ) ಪ್ರಕಟಿಸಿದ್ದಾರೆ. ಕನ್ನಡ ಛಂದಸ್ಸು: ಸಂಕ್ಷಿಪ್ತ ಪರಿಚಯ, ಕಲ್ಯಾಣದ ಚಾಲುಕ್ಯರು, ಸರಸ್ವತಿ- ವಿಸ್ಮಯ ಸಂಸ್ಕೃತಿ ಸಂಶೋಧನಾ ಕೃತಿ ರಚಿಸಿದ್ದಾರೆ. ಹಿರಿಯ ಸಂಶೋಧಕ ಹಂ.ಪ.ನಾಗರಾಜಯ್ಯ ಅವರ ಕೃತಿಗಳ ಸಾರ ಸೂಚಿ ಹೊಂದಿರುವ ’ಹಂಪನಾ ವಾಙ್ಮಯ’ ಪ್ರಕಟಿಸಿರುವ ಅವರು ಪೇಜತ್ತಾಯ ಅವರ ’ರೈತನಾಗುವ ಹಾದಿಯಲ್ಲಿ’ ಮತ್ತು ’ಕಾಗದದ ದೋಣಿ’ ಕೃತಿಗಳನ್ನು ಸಂಪಾದಕರಾಗಿ ಹೊರ ...
READ MORE