ಕಿತ್ತಾನೆ ರಂಗಣ್ಣ ನಾಗರಾಜ್ ರವರು ಕನ್ನಡ ಸಾಹಿತ್ಯ ಲೋಕದ ಹಿರಿಯ ವಿಮರ್ಶಕ, ಚಿಂತಕ. ಕಿ. ರಂ ಎಂದೇ ಪ್ರಸಿದ್ದಿಯಾದವರು. ಕನ್ನಡದ ಶ್ರೇಷ್ಠ ಚಿಂತಕರಲ್ಲಿ ಒಬ್ಬರು. ಇವರು ಸಾವಿರಾರು ವರ್ಷಗಳಿಗೂ ಮೀರಿದ ಕನ್ನಡ ಸಾಹಿತ್ಯ ಚರಿತ್ರೆಯ ಹಲಬಗೆಯ ಸಾಹಿತ್ಯ ಕೃತಿಗಳನ್ನು ಅದ್ಭುತವಾಗಿ ಅನುಸಂಧಾನ ಮಾಡಿದ ವಿಶಿಷ್ಟ ವಿಮರ್ಶಕರಾಗಿಯೂ ಗುರುತಿಸಿಕೊಂಡಿದ್ದಾರೆ. ನಟರಾಜ್ ಹುಳಿಯಾರ್ ರವರು ಸಂಪಾದಿಸಿರುವ ಕಿ.ರಂ ರವರ ಆಯ್ದ ಬರಹಗಳನ್ನು ಈ ಕೃತಿಯಲ್ಲಿ ಕೊಡಲಾಗಿದೆ. ಈ ಕೃತಿಯೂ ಕಿ.ರಂ ರವರ ಚಿಂತನೆ ಹಾಗೂ ಸೃಜನಶೀಲತೆಯ ಎಲ್ಲಾ ಮಗ್ಗುಲುಗಳನ್ನೂ ಮಂಡಿಸುವ ಮಹತ್ವದ ಪ್ರಕಟಣೆಯಾಗಿ ಮೂಡಿಬಂದಿದೆ.
ಕತೆಗಾರ-ಲೇಖಕ ನಟರಾಜ ಹುಳಿಯಾರ್ ಅವರು ತುಮಕೂರು ಜಿಲ್ಲೆಯ ಹುಳಿಯಾರಿನವರು. ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ (ಎಂ.ಎ.) ಪದವಿ ಪಡೆದಿರುವ ಅವರು'ಆಧುನಿಕ ಆಫ್ರಿಕನ್ ಹಾಗೂ ಕನ್ನಡ ಸಾಹಿತ್ಯಗಳಲ್ಲಿ ಆಧುನಿಕತೆ ಮತ್ತು ಪರಂಪರೆ’ ವಿಷಯದಲ್ಲಿ ಪಿಎಚ್.ಡಿ. ಪದವಿ ಪಡೆದಿದ್ದಾರೆ. ಸದ್ಯ ಬೆಂಗಳೂರು ವಿಶ್ವ ವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದಾರೆ. ಮತ್ತೊಬ್ಬ ಸರ್ವಾಧಿಕಾರಿ, ಬಸವಲಿಂಗಪ್ಪನವರು ಮತ್ತು ಡೇವಿಡ್ ಸಾಹೇಬರು, ಮಾಯಾಕಿನ್ನರಿ (ಕಥಾಸಂಕಲನಗಳು), ರೂಪಕಗಳ ಸಾವು (ಕವಿತೆಗಳು), ಗಾಳಿಬೆಳಕು (ಸಾಂಸ್ಕತಿಕ ಬರಹಗಳು), ಆಫ್ರಿಕನ್ ಹಾಗೂ ಕನ್ನಡ ಸಾಹಿತ್ಯಗಳಲ್ಲಿ ಆಧುನಿಕತೆ ಮತ್ತು ಪರಂಪರೆ (ತೌಲನಿಕ ಅಧ್ಯಯನ), ಇಂತಿ ನಮಸ್ಕಾರಗಳು (ಲಂಕೇಶ್-ಡಿ.ಆರ್. ನಾಗರಾಜ್ ಕುರಿತ ...
READ MORE