ತೃಷೆ

Author : ಸಂತೋಷ್ ಅನಂತಪುರ

Pages 184

₹ 225.00




Year of Publication: 2024
Published by: ಅಂಕಿತ ಪುಸ್ತಕ
Address: #53, ಶ್ಯಾಮ್‌ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು - 560 004.
Phone: 080 - 2661 7100 / 2661 7755

Synopsys

‘ತೃಷೆ’ ಸಂತೋಷ್ ಅನಂತಪುರ ಅವರ ಕಥಾ ಸಂಕಲನವಾಗಿದೆ. ಇದಕ್ಕೆ ಬೊಳುವಾರು ಅವರ ಬೆನ್ನುಡಿ ಬರಹವಿದೆ; ಈ ಸಂಕಲನದಲ್ಲಿ ಸೇರಿಕೊಂಡಿರುವ ಹತ್ತೂ ಕತೆಗಳಿಗೆ ಒಬ್ಬೊಬ್ಬ ಓದುಗರ ಅನಿಸಿಕೆಗಳನ್ನು ದಾಖಲಿಸಿಕೊಂಡಿರುವುದು ವಿಶೇಷ. 'ಕೂಪ' ಕತೆಯ ಬಗ್ಗೆ ಬರೆಯುತ್ತಾ, 'ಸಪ್ತಭಾಷೆಗಳ ಸಂಗಮಸ್ಥಳ' ಕಾಸರಗೋಡಿನ ಒಂದು ಪ್ರದೇಶದ ಜನರು ಸಾಮಾನ್ಯವಾಗಿ ಬಳಸುವ ಕನ್ನಡ, ತುಳು, ಕೊಂಕಣಿ, ಮಲೆಯಾಳಂ, ಬ್ಯಾರಿ ಹಾಗೂ ಹಿಂದಿ, ಇಂಗ್ಲಿಷ್ ಭಾಷೆಗಳು ಪರಸ್ಪರ ಬೆಸೆದುಕೊಂಡು ಒಂದು ಪ್ರತ್ಯೇಕ ಭಾಷೆಯಾಗಿ ಅಸ್ಮಿತೆ ಪಡೆಯುತ್ತಾ ದಟ್ಟ ವಿವರಗಳಲ್ಲಿ ಚಿತ್ರಣಗೊಳ್ಳುವ ಈ ಕತೆಗಳ ಪರಿ ಅನನ್ಯ. ಪ್ರಾಯಶಃ ಕಾಸರಗೋಡು ಪ್ರದೇಶದ ಭಾಷೆ ಹಾಗೂ ಸಾಂಸ್ಕೃತಿಕ ವಿವರಗಳನ್ನು ಇಷ್ಟು ಸಶಕ್ತವಾಗಿ ಅಭಿವ್ಯಕ್ತಿಸಿದ ಕಥೆಗಳು ಇದುವರೆಗೆ ಕನ್ನಡದಲ್ಲಿ ಬಂದಿಲ್ಲವೆಂದೇ ಹೇಳಬೇಕು, ಎಂದು ತಿಳಿಸಿದ್ದಾರೆ. 

About the Author

ಸಂತೋಷ್ ಅನಂತಪುರ

ಲೇಖಕ ಸಂತೋಷ್ ಅನಂತಪುರ ಅವರು ಮೂಲತಃ ಕೇರಳದ ಕಾಸರಗೋಡು ಜಿಲ್ಲೆಯ ಅನಂತಪುರದವರು. ಕೇರಳ ರಾಜ್ಯದಲ್ಲೇ ಪದವಿಪೂರ್ವ ಶಿಕ್ಷಣ ಪೂರೈಸಿ, ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಹಾಗೂ ಮಂಗಳೂರು ವಿ.ವಿ.ಯಿಂದ ಪತ್ರಿಕೋದ್ಯಮದಲ್ಲಿ  ಸ್ನಾತಕೋತ್ತರ ಪದವಿ ಪಡೆದರು. ವಿದ್ಯಾ ಸಂಸ್ಥೆ ಹಾಗೂ ಕಾರ್ಪೋರೇಟ್ ಸಂಸ್ಥೆಗಳಲ್ಲಿ ಕೆಲಸ ಮಾಡಿದ ಅನುಭವ ಅವರಿಗಿದೆ. ಸದ್ಯ, ಬೆಂಗಳೂರಿನಲ್ಲಿ ಇನ್ಫೋಸಿಸ್ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕಥೆ-ಕವನ - ಲೇಖನಗಳು ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳು ಸಾಮಾಜಿಕ ಜಾಲತಾಣ ಹಾಗೂ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಜಿಡ್ಡು ಕೃಷ್ಣಮೂರ್ತಿ ಅವರ ಒಂದು ಆಂಗ್ಲ ಕೃತಿ ಹಾಗೂ ಲೇಖನಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ.  ಕೃತಿಗಳು: ಕಾಗೆ ...

READ MORE

Related Books