ಪರ್ಷಿಯನ್ ಕವಿ ಉಮರ್ ಖಯ್ಯಾಮ್ ಅವರ ಚೌಪದಿಗಳನ್ನು ಹಿರಿಯ ಸಾಹಿತಿ ಡಿ.ವಿ.ಜಿ ಅವರು ಇಂಗ್ಲಿಷ್ ನಿಂದ ಕನ್ನಡಕ್ಕೆ ಅನುವಾದಿಸಿದ್ದಾರೆ. ಹನ್ನೊಂದನೇ ಶತಮಾನದ ಪರ್ಷಿಯನ್ ಕವಿ ಉಮರ್ ಖಯ್ಯಾಮ್ ಅವರ ಚೌಪದಿಗಳನ್ನು 1930ರಲ್ಲೇ ಸ್ಕಾಟ್ ಫಿಟ್ಜ್ ಜೆರಾಲ್ಡ್ ಇಂಗ್ಲಿಷ್ ಗೆ ಅನುವಾದಿಸಿದ್ದರು. ಕನ್ನಡದ ಚೌಪದಿಯ ಸ್ವರೂಪವನ್ನು ಅರಗಿಸಿಕೊಂಡು ಫಿಟ್ಜ್ ಜೆರಾಲ್ಡ್ ಮೂಲಕ ಬಂದ ಪರ್ಷಿಯಾದ ಸಂವೇದನೆಗಳನ್ನು ಕನ್ನಡದ್ದೇ ಪದ್ಯಗಳನ್ನಾಗಿಸುವಲ್ಲಿ ಡಿ.ವಿ.ಜಿ ಅವರು ಯಶಸ್ವಿಯಾಗಿದ್ದಾರೆ. ಈ ಪುಸ್ತಕದಲ್ಲಿ ಉಮರ ಮತ್ತು ಆತನ ಕವನಗಳ ಇಂಗ್ಲಿಷ್ ಅನುವಾದಕ ಫಿಟ್ಜ್ ಜೆರಾಲ್ಡ್ ಅವರ ಬಗ್ಗೆಯೂ ವಿವರಗಳಿವೆ.
ಮಂಕುತಿಮ್ಮನ ಕಗ್ಗ ಕಾವ್ಯದಿಂದ ಲೋಕವಿಖ್ಯಾತರಾದ ಡಿವಿಜಿ ಅವರು (ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪ) ಲೇಖಕ- ಪತ್ರಕರ್ತ. ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ 1887ರ ಮಾರ್ಚ್ 17ರಂದು ಜನಿಸಿದ ಗುಂಡಪ್ಪ ಅವರು ಪ್ರೌಢಾಶಾಲಾ ಶಿಕ್ಷಣವನ್ನು ಮೈಸೂರು ಮಹಾರಾಜ ಪ್ರೌಢಶಾಲೆಯಲ್ಲಿ ಪಡೆದರು. ಮೆಟ್ರಿಕ್ ಪರೀಕ್ಷೆಯಲ್ಲಿ ಉತ್ತೀರ್ಣರಾಗದಿದ್ದರೂ ಸ್ವಂತ ಅಧ್ಯಯನದಿಂದ ಕನ್ನಡ, ಸಂಸ್ಕೃತ, ಇಂಗ್ಲಿಷ್ ಭಾಷೆಗಳಲ್ಲಿ ಪರಿಣತರಾಗಿದ್ದರು. ಮುಳುಬಾಗಿಲಿನ ಒಂದು ಶಾಲೆಯಲ್ಲಿ ಕೆಲವು ಕಾಲ ಬದಲಿ ಅಧ್ಯಾಪಕರಾಗಿ ಕಾರ್ಯ ನಿರ್ವಹಿಸಿದರು. ಅನಂತರ ಕೋಲಾರದ ಸೋಡಾ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡಿ ಬೇಸತ್ತು ಬೆಂಗಳೂರಿನಲ್ಲಿ ಜಟಕಾಬಂಡಿಗೆ ಬಣ್ಣ ಬಳಿಯುವ ಕಾರ್ಖಾನೆಯಲ್ಲಿ ಕೆಲಕಾಲ ಕೆಲಸ ಮಾಡಿದರು. ಅನಂತರ ಪತ್ರಿಕಾರಂಗ ...
READ MORE