‘ಉಪನಿಷತ್ತುಗಳು’ ಜಿ.ರಾಮಕೃಷ್ಣ ಅವರ ವಿಮರ್ಶಾ ಕೃತಿಯಾಗಿದೆ. ಈ ಕೃತಿಯನ್ನು ಪರಿಚಯಿಸುತ್ತಾ ಲೇಖಕರು ಹೀಗೆ ಹೇಳಿದ್ದಾರೆ; ಇದು ಕೆಲವು ಪ್ರಮುಖ ಉಪನಿಷತ್ತುಗಳನ್ನು ಪರಿಚಯಿಸುವ ಪುಸ್ತಕವೇ ಆದರೂ ವಿಮರ್ಶಾತ್ಮಕ ನೆಲೆಯಲ್ಲಿ ಅವನ್ನು ಕಾಣುವ ಪ್ರಯತ್ನವಾಗಿದೆ. ನಿಗೂಢವಾದ ತತ್ತ್ವಶಾಸ್ತ್ರದ ಆಗರವೆಂದು ಉಪನಿಷತ್ತುಗಳನ್ನು ಶ್ಲಾಘಿಸುವ ಪದ್ಧತಿಗೆ ಭಿನ್ನವಾಗಿ ಚಾರಿತ್ರಿಕ ದೃಷ್ಟಿಯಿಂದ ಅವನ್ನು ಅವಲೋಕಿಸುವುದು ಇಲ್ಲಿಯ ಉದ್ದೇಶ. ಸುಮಾರು 3500 ವರ್ಷಗಳ ಹಿಂದೆಯೇ ರಚಿತವಾದ ಉಪನಿಷತ್ತುಗಳು ಮಾನವ ಮತ್ತು ಪ್ರಕೃತಿಯ ಅವಲೋಕನವನ್ನು ಗಂಭೀರವಾಗಿ ಕೈಗೆತ್ತಿಕೊಂಡಿವೆ. ಅವು ಯಾವ ದಿಕ್ಕಿನಲ್ಲಿ ತಮ್ಮ ಚಿಂತನೆಯನ್ನು ಬೆಳೆಸಿವೆ ಎಂಬ ವಿಚಾರವನ್ನು ವಸ್ತುನಿಷ್ಠವಾಗಿ ವಿವೇಚಿಸುವ ಪ್ರಯತ್ನ ಇಲ್ಲಿ ನಡೆದಿದೆ ಎಂಬುದನ್ನು ಈ ಪುಸ್ತಕದಲ್ಲಿ ನೋಡಬಹುದು.
ಜಿ. ರಾಮಕೃಷ್ಣ ಸಂಸ್ಕೃತದಲ್ಲಿ ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ. ಮತ್ತು ಪಿಎಚ್.ಡಿ. ಪದವಿಗಳನ್ನೂ, ಪುಣೆ ಹಾಗೂ ವೇಲ್ ವಿಶ್ವವಿದ್ಯಾನಿಲಯಗಳಿಂದ ಇಂಗ್ಲಿಷ್ನಲ್ಲಿ ಎಂ.ಎ. ಪದವಿಗಳನ್ನೂ ಪಡೆದಿದ್ದಾರೆ. ಮಹಾಡಿನ ಡಾ.ಅಂಬೇಡ್ಕರ್ ಕಾಲೇಜು ಮತ್ತು ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜುಗಳಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ ಸುಮಾರು ಮೂವತ್ತು ವರ್ಷ ಕೆಲಸ ಮಾಡಿದ್ದಾರೆ, ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಸಂದರ್ಶಕ ಪ್ರಾಧ್ಯಾಪಕರಾಗಿದ್ದುಕೊಂಡು “ಭಾರತೀಯ ವಿಜ್ಞಾನದ ಹಾದಿ” ಎಂಬ ಮೌಲಿಕ ಕೃತಿಯನ್ನು ರಚಿಸಿದ್ದಾರೆ. ಇವರ “ಮುನ್ನೋಟ' ಹಾಗೂ 'ಆಯತನ' ಗ್ರಂಥಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಬಹುಮಾನ ಲಭ್ಯವಾಗಿದೆ. ಮಾರ್ಕ್ಸ್ವಾದಿ ಅಧ್ಯಯನಗಳಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ಭಗತ್ಸಿಂಗ್, ಚೆ ಗೆವಾರಾ, ...
READ MORE