ಉರಿ, ವಿನಯಾ ಕತೆಗಳು

Author : ವಿನಯಾ ಒಕ್ಕುಂದ

Pages 104

₹ 90.00




Year of Publication: 2014
Published by: ಅಹರ್ನಿಶಿ ಪ್ರಕಾಶನ
Address: # ಜ್ಞಾನವಿಹಾರ ಬಡಾವಣೆ, ಕಂಟ್ರಿ ಕ್ಲಬ್‌ ಎದುರು ವಿದ್ಯಾ ನಗರ ಶಿವಮೊಗ್ಗ
Phone: 9449174662

Synopsys

‘ಉರಿ’ ಎಂಬುದು ಲೇಖಕಿ ಡಾ. ವಿನಯಾ ಒಕ್ಕುಂದ ಅವರ ಕತೆಗಳ ಸಂಕಲನ. ಬಹುತೇಕ ಕತೆಗಳು ಸ್ತ್ರೀವಾದವನ್ನು ಎತ್ತಿ ಹಿಡಿಯುತ್ತವೆ. ಪುರುಷರ ದಬ್ಬಾಳಿಕೆಯನ್ನು ಪ್ರತಿಭಟಿಸುವ ಇಲ್ಲಿಯ ಕಥೆಗಳು, ಮಾನವೀಯತೆಯನ್ನು ಸಮರ್ಥಿಸಿಕೊಳ್ಳುತ್ತವೆ. ವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಓದುಗರ ಗಮನ ಸೆಳೆಯುತ್ತವೆ.

 

About the Author

ವಿನಯಾ ಒಕ್ಕುಂದ
(24 October 1968)

ವಿನಯಾ- ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ, ಕುಮಟಾ ತಾಲೂಕಿನ ನಾಡುಮಾಸ್ಕೇರಿಯಲ್ಲಿ. ಕರ್ನಾಟಕ ವಿಶ್ವವಿದ್ಯಾಲಯದಿಂದ 1990ರಲ್ಲಿ ಕನ್ನಡ ಎಂ.ಎ, 1992ರಲ್ಲಿ ಎಂ.ಫಿಲ್. ಹಾಗೂ 1996ರಲ್ಲಿ ಪಿಎಚ್.ಡಿ ಪದವಿ ಪಡೆದಿದ್ದು, ಸವಣೂರು, ನರಗುಂದದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕನ್ನಡ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸಿದ್ದಾರೆ. ಸಧ್ಯ ಧಾರವಾಡ ಜಿಲ್ಲೆಯ ಅಳ್ಳಾವರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಸಹ ಪ್ರಾಧ್ಯಾಪಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬರವಣಿಗೆಯನ್ನು ಹವ್ಯಾಸವಾಗಿಸಿಕೊಂಡಿರುವ ಇವರು ಹಲವು ಕೃತಿಗಳನ್ನು ರಚಿಸಿದ್ದಾರೆ. ವಿನಯಾ ಅವರ ಕವನ ಸಂಕಲನಗಳು: ಬಾಯಾರಿಕೆ, ನೂರು ಗೋರಿಯ ದೀಪ, ಹಸಬಿ, ಇನ್ನೂ ಕಥಾ ಸಂಕಲನಗಳು: ಊರ ...

READ MORE

Related Books