1930 ರಿಂದ 1975ರವರೆಗಿನ ಸಮಯದಲ್ಲಿ ದಕ್ಷಣ ಕನ್ನಡ ಜಿಲ್ಲೆಯಲ್ಲಿ ಉಂಟಾದ ಬದಲಾವಣೆಗಳೇ ‘ಉತ್ತರಾಧಿಕಾರ’ ಕಾದಂಬರಿಯ ಕಥಾನಕ. ಡಾ. ಜನಾರ್ದನ ಭಟ್ ಅವರ ಈ ಕಾದಂಬರಿಗೆ 2012ನೇ ಸಾಲಿನ ವರ್ಧಮಾನ ಸಾಹಿತ್ಯ ಪ್ರಶಸ್ತಿ ದೊರೆತಿದೆ. ಸ್ವಾತಂತ್ರ್ಯ ಪೂರ್ವ ಮತ್ತು ನಂತರದ ಕಾಲದ ತುಳುನಾಡಿನ ಜನರ ಜೀವನ ಶೈಲಿ, ಅವರ ಬದುಕಿನಲ್ಲಿ ಸಂಭವಿಸಿದ ಏರಿಳಿತಗಳೇ ಈ ಕಾದಂಬರಿಯ ಜೀವಾಳ. ವಾಸ್ತವಿಕತೆಯನ್ನು ಮನಮುಟ್ಟುವ ಶೈಲಿಯಲ್ಲಿ ತೆರೆದಿಡುವ ಮೂಲಕ ಜನಮನ್ನಣೆ ಗಳಿಸಿದೆ.
ಸಾಹಿತಿ ಡಾ. ಬಿ.ಜನಾರ್ದನ ಭಟ್ ಅವರದು ಬಹುಮುಖ ಪ್ರತಿಭೆ. ಅವರು ಕಾದಂಬರಿಕಾರರಾಗಿ, ಕಥೆಗಾರರಾಗಿ, ವಿಮರ್ಶಕರಾಗಿ, ಅಂಕಣಕಾರರಾಗಿ ತಮ್ಮ ಛಾಪನ್ನು ಮೂಡಿಸಿದ್ದಾರೆ. ಅವರ ಸಾಹಿತ್ಯಾನುಸಂಧಾನ ಬಹುಸೂಕ್ಷ್ಮವಾದುದು. ಬಹುಭಾಷಿಕ, ಬಹುಶ್ರುತ ವಿದ್ವಾಂಸರೂ ಸೃಜನಶೀಲ ಲೇಖಕರೂ ಆಗಿರುವ ಭಟ್ ಅವರದು ಸ್ಪೋಪಜ್ಞತೆಯ ಹಾದಿ. ತಮ್ಮ ಕೃತಿಗಳಲ್ಲಿ ಹೆಚ್ಚಿನ ಸ್ವಂತಿಕೆಯ ಛಾಪನ್ನು ಒತ್ತುತ್ತಾ ಬಂದಿರುವ ಡಾ. ಜನಾರ್ದನ ಭಟ್ ಅವರು ಸಮಕಾಲೀನ ಕನ್ನಡದ ಹೆಸರಾಂತ ಲೇಖಕರಲ್ಲಿ ಒಬ್ಬರು. ಭಟ್ ಅವರ ಹೆಚ್ಚಿನ ಕೃತಿಗಳು ಆಳ ಮತ್ತು ಸಂಕೀರ್ಣತೆಯನ್ನು ಹೊಂದಿರುವುದು ವಿಶೇಷ. ವಿದ್ವತ್ತು ಮತ್ತು ಸೃಜನಶೀಲತೆ ಎರಡನ್ನೂ ಮೈಗೂಡಿಸಿಕೊಂಡಿರುವ ಬೆಳ್ಮಣ ನ ಡಾ. ಬಿ.ಜನಾರ್ದನ ...
READ MORE