`ವಚನ ಪಾರಿಭಾಷಕೋಶ ಸಮಗ್ರ ವಚನ ಸಂಪುಟ-15’ ಕೃತಿಯು ಎನ್. ಜಿ ಮಹಾದೇವಪ್ಪ ಅವರ ವಚನ ಸಂಪುಟ ಕೃತಿಯಾಗಿದೆ. ಈ ಕೃತಿಯ ಬೆನ್ನುಡಿಯಲ್ಲಿ, ‘ಸಮಗ್ರ ವಚನ ಸಾಹಿತ್ಯದ ಪ್ರಕಟನ ಯೋಜನೆ'ಯ ಅಡಿಯಲ್ಲಿ ಈ ಕೃತಿಗಳು ಹೊರಬಂದಿದ್ದು, ಕರ್ನಾಟಕ ಸರ್ಕಾರದ ಈವರೆಗಿನ ಸಾಹಿತ್ಯಕ ಸಾಧನೆಗಳಲ್ಲಿ ಒಂದು ಮಹತ್ವದ ದಾಖಲೆಯಾಗಿದೆ. ಒಂದು ಸಾಹಿತ್ಯ ಪ್ರಕಾರದ ಪ್ರಕಟನೆ ಎಂದು ವಿಶ್ಲೇಷಿಸಲಾಗಿದೆ. ತತ್ವಕ್ಕೆ ತತ್ವ, ಸಾಹಿತ್ಯಕ್ಕೆ ಸಾಹಿತ್ಯವಾಗಿರುವ 'ವಚನ ವಾಙ್ಞಯ ' ಏಕಕಾಲಕ್ಕೆ ಆತ್ಮಕಲ್ಯಾಣವನ್ನೂ, ಸಮಾಜ ಕಲ್ಯಾಣವನ್ನೂ ಪ್ರತಿಪಾದಿಸುವ ಮೂಲಕ ಜಾಗತಿಕ ಮಹತ್ವ ಗಳಿಸಿದೆ. ಈ ಮೌಲಿಕ ಸಾಹಿತ್ಯವನ್ನು ಸುಲಭ ಬೆಲೆಯಲ್ಲಿ ಜನತೆಗೆ ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಇವತ್ತಿನ ಮಿತಿಗೆ ಸಿಗುವ ಬಸವಯುಗ ಮತ್ತು ಬಸವೋತ್ತರ ಯುಗಗಳ ಎಲ್ಲ ಶರಣರ ಎಲ್ಲ ವಚನಗಳನ್ನು ಸಂಗ್ರಹಿಸಿ, ಸಂಸ್ಕರಿಸಿ, ಪ್ರಕಟಿಸಿದ ಪ್ರಯತ್ನವಿದು. ಈ ಮೂಲಕ ಬಸವಯುಗದ ಹಲವು ಹೊಸ ವಚನಗಳು ಬೆಳಕಿಗೆ ಬರುವುದರೊಂದಿಗೆ, ಬಸವೋತ್ತರ ಯುಗದ ಸಮಗ್ರ ವಚನ ಸಂಪತ್ತು ಪ್ರಥಮಸಲ ಹೊರ ಬರುತ್ತಿರುವುದು ಈ ಯೋಜನೆಯ ವಿಶೇಷ ಸಾಧನೆಯಾಗಿದೆ. 800 ವರ್ಷಗಳುದ್ದಕ್ಕೂ ಬೆಳೆದುಬಂದ ಈ ಸಾಹಿತ್ಯದ ವ್ಯಾಪ್ತಿಯನ್ನು ಪ್ರಥಮಬಾರಿ ಗುರುತಿಸಿಕೊಡುತ್ತಿರುವ ಈ ಸಾಹಸದ ಫಲವಾಗಿ 22 ಸಾವಿರ ವಚನಗಳು ಸುಮಾರು 10 ಸಾವಿರ ಪುಟ ವ್ಯಾಪ್ತಿಯ 15 ಸಂಪುಟಗಳಲ್ಲಿ (ವಚನ ಪರಿಭಾಷಾಕೋಶ ಸೇರಿ)ಬೆಳಕು ಕಾಣುತ್ತಿದೆ ಎಂಬುದನ್ನು ಪ್ರಸ್ತಾಪಿಸಲಾಗಿದೆ.
©2024 Book Brahma Private Limited.