ವಚನಧರ್ಮ ಅರಿವಿನ ಬೆರಗು

Author : ಎಸ್.ಜಿ. ಸಿದ್ಧರಾಮಯ್ಯ

Pages 353

₹ 250.00




Published by: ಸಪ್ನ ಬುಕ್ ಹೌಸ್
Address: 3ನೇ ಮುಖ್ಯ ರಸ್ತೆ. ಗಾಂಧಿನಗರ, ಬೆಂಗಳೂರು, 560009
Phone: 080 4011 4455

Synopsys

ಪ್ರಜಾವಾಣಿಯ ‘ಅಮೃತವಾಕ್ಕು’  ಎಂಬ ಅಂಕಣದಲ್ಲಿ ಪ್ರಕಟವಾದ 163 ಚಿಕ್ಕ ಲೇಖನಗಳನ್ನು ಲೇಖಕರು ಕೃತಿಯಲ್ಲಿ ನೀಡಿದ್ದಾರೆ. ಈ ಕೃತಿಯಲ್ಲಿರುವ ಪ್ರತಿ ಲೇಖನದಲ್ಲೂ ವಚನಗಳನ್ನು ಕುರಿತ ಅತ್ಯಂತ ಸೂಕ್ಷ್ಮ ವಾದ ಒಳನೋಟಗಳು ಕಾಣಸಿಗುತ್ತವೆ. ಶರಣ ಧರ್ಮ ಅರಿಯಲು  ಇದು ಉಪಯುಕ್ತವಾದ ಕೃತಿಯಾಗಿದೆ. ಹೀಗೆ ಹಲವು ಪ್ರಮುಖ ವಿಷಯಗಳ ಮೇಲೆ ಕೃತಿ ಬೆಳಕು ಚೆಲ್ಲಿದೆ.

About the Author

ಎಸ್.ಜಿ. ಸಿದ್ಧರಾಮಯ್ಯ
(19 November 1946)

ಹಿರಿಯ ಸಾಹಿತಿಗಳಾದ ಎಸ್.ಜಿ. ಸಿದ್ಧರಾಮಯ್ಯನವರು ಹುಟ್ಟಿದ್ದು ತುಮಕೂರು ಜಿಲ್ಲೆಯ ಚಿಕ್ಕನಾಯಕನ ಹಳ್ಳಿ ತಾಲ್ಲೂಕಿನ ಸಿಂಗಾಪುರ ಗ್ರಾಮದಲ್ಲಿ. ತಂದೆ-ಗುರುಭಕ್ತಯ್ಯ, ತಾಯಿ-ರೇವಮ್ಮ. ಪ್ರಾರಂಭಿಕ ಶಿಕ್ಷಣವನ್ನು ಹುಟ್ಟೂರಿನಲ್ಲಿಯೇ ಪಡೆದ ಅವರು  ಪ್ರೌಢಶಾಲೆ ಚಿಕ್ಕನಾಯಕನಹಳ್ಳಿ ಪೂರ್ಣಗೊಳಿಸಿದರು. ಕಾಲೇಜು ವಿದ್ಯಾಭ್ಯಾಸವನ್ನು ತುಮಕೂರಿನಲ್ಲಿ ಆರಂಭಿಸಿದ ಅವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ ಪಡೆದರು. ಆನಂತರ ತುಮಕೂರಿನ ಸಿದ್ಧಗಂಗಾ ಕಾಲೇಜಿನಲ್ಲಿ ಅಧ್ಯಾಪಕರಾಗಿ ವೃತ್ತಿಜೀವನ ಆರಂಭಿಸಿದ ಅವರು ಮಡಿಕೇರಿ, ಸಿಂಧನೂರು, ತುಮಕೂರು, ಕೊರಟಗೆರೆ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ತುಮಕೂರು, ಚಿಕ್ಕನಾಯಕನ ಹಳ್ಳಿ, ಹೊಸದುರ್ಗ, ಮಧುಗಿರಿ ಕಾಲೇಜುಗಳಲ್ಲಿ ಪ್ರಾಂಶುಪಾಲರಾಗಿ ಹುದ್ದೆ ನಿರ್ವಹಿಸಿದ್ದಾರೆ. ಅಲ್ಲದೇ ದುಃಸ್ಥಿತಿಯಲ್ಲಿದ್ದ ಕಾಲೇಜುಗಳಿಗೆ ಶೈಕ್ಷಣಿಕ ಕಾಯಕಲ್ಪ ...

READ MORE

Related Books