ವೈವಿಧ್ಯತೆಯಲ್ಲಿ ಸಾಮ್ಯತೆ, ಯುರೋಪಿನ ಹದಿನಾಲ್ಕು ದೇಶಗಳು

Author : ಡಿ.ವಿ. ಗುರುಪ್ರಸಾದ್

Pages 188

₹ 126.00




Year of Publication: 2016
Published by: ಸಪ್ನ ಬುಕ್ ಹೌಸ್
Address: ಆರ್.ಓ. #11, 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು-9

Synopsys

ಲೇಖಕ ಡಿ.ವಿ. ಗುರುಪ್ರಸಾದ್ ಅವರು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಉನ್ನತ ಅಧಿಕಾರಿಗಳಾಗಿ ನಿವೃತ್ತರು. ಅಧಿಕಾರವಧಿಯಲ್ಲಿದ್ದಾಗ ಕಾರ್ಯ ನಿಮಿತ್ತ ಅವರು ಕೈಗೊಂಡ ಪ್ರವಾಸದಲ್ಲಿಯ ಅನುಭವಗಳನ್ನು ಇಲ್ಲಿ ದಾಖಲಿಸಿದ್ದಾರೆ. ಯುರೋಪಿನ 14 ದೇಶಗಳನ್ನು ಸುತ್ತಿರುವ ಲೇಖಕರು, ಆ ದೇಶಗಳ ನಡುವಿನ ಸಾಮ್ಯತೆಯನ್ನು ಗುರುತಿಸಿದ್ದಾರೆ. ಅವುಗಳ ಬಗ್ಗೆ ತಮ್ಮ ವಿಚಾರಗಳನ್ನು ಮಂಡಿಸಿದ್ದಾರೆ. ಏನೆಲ್ಲ ವೈವಿಧ್ಯತೆ ಇದ್ದೂ ಈ 14 ದೇಶಗಳಲ್ಲಿ ಸಾಮ್ಯತೆಯ ಲಕ್ಷಣಗಳೂ ಇವೆ. ಅವು ಅಭಿವೃದ್ಧಿ ಪಥದಲ್ಲಿ ಹೇಗೆ ಪರಸ್ಪರವಾಗಿ ಪೂರಕವಾಗಿವೆ ಎಂಬುದನ್ನು ಚರ್ಚಿಸಿದ್ದಾರೆ.

About the Author

ಡಿ.ವಿ. ಗುರುಪ್ರಸಾದ್

ಲೇಖಕ ಡಿ.ವಿ. ಗುರುಪ್ರಸಾದ್ ಅವರು ನಿವೃತ್ತ ಪೊಲೀಸ್ ಅಧಿಕಾರಿಗಳಾಗಿದ್ದು, ರಾಜ್ಯದ ಪೊಲೀಸ್ ಗುಪ್ತಚರದಳ ಮುಖ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ತಮ್ಮ ವೃತ್ತಿ ಬದುಕಿನ ಅನುಭವ ಮತ್ತು ತಮ್ಮ ವಿಚಾರಗಳನ್ನು ಕೃತಿಗಳ ಮೂಲಕ ದಾಖಲಿಸುವ ಇವರು ಕ್ರೈಂ ಲೋಕದ ವಿಸ್ಮಯ, ವಿಚಿತ್ರ ಸಂಗತಿಗಳನ್ನು ಓದುಗರಮುಂದಿಡುತ್ತಾ ಬಂದಿದ್ದಾರೆ.  ‘ಪೊಲೀಸ್ ಜೀವನದಲ್ಲಿ ಹಾಸ್ಯ', 'ವೀರಪ್ಪನ್ : ದಂತಚೋರನ ಬೆನ್ನಟ್ಟಿ', 'ಕೈಗೆ ಬಂದ ತುತ್ತು’, ‘ಪೊಲೀಸ್ ಎನ್ ಕೌಂಟರ್’, 'ಕ್ರೈಂ ಕಥೆಗಳು', 'ನೀವು ಒಮ್ಮೆ ಫೇಲ್ ಆಗಲೇಬೇಕು', 'ಅಪರಾಧಗಳ ಆ ಕ್ಷಣ', 'ವಿಶ್ವಪರ್ಯಟನೆ', 'ರಾಜೀವ್ ಗಾಂಧಿ ಭೀಕರ ಹತ್ಯೆ', 'ವೈವಿಧ್ಯತೆಯಲ್ಲಿ ಸಾಮ್ಯತೆ -ಯುರೋಪಿನ ಹದಿನಾಲ್ಕು ದೇಶಗಳು', 'ಗಲ್ಲುಗಂಬದ ...

READ MORE

Related Books