ಖ್ಯಾತ ಲೇಖಕ ನಾಗತಿಹಳ್ಳಿ ಚಂದ್ರಶೇಖರ ಅವರ ಕಾದಂಬರಿ-ವಲಸೆ ಹಕ್ಕಿಯ ಹಾಡು. ಸ್ವಾತಂತ್ರ್ಯ ಹೋರಾಟಗಾರನೊಬ್ಬನ ಜೀವನವನ್ನು ಕಟ್ಟಿಕೊಡುವ ಹಾಗೂ ಸ್ವಾತಂತ್ಯ್ರ ಹೋರಾಟಗಾರರನ ಮಕ್ಕಳೇ ಅವರನ್ನು ಗಂಭೀರವಾಗಿ ತೆಗೆದುಕೊಳ್ಳದೇ ಕನಿಷ್ಠವಾಗಿ ನಡೆಸಿಕೊಳ್ಳುವ ಚಿತ್ರಣವನ್ನು ಹೊಂದಿದೆ. ಆದರ್ಶ ಜೀವನವು ಆಧುನಿಕತೆಯ ಪರಿಣಾಮದೊಂದಿಗೆ ಹೇಗೆ ತನ್ನ ಸ್ವರೂಪವನ್ನು ಬದಲಿಸುತ್ತದೆ ಎಂಬುದನ್ನು ಪರಿಣಾಮಕಾರಿಯಾಗಿ ಚಿತ್ರಿಸಿದೆ.
ನಾಗತಿಹಳ್ಳಿ ಚಂದ್ರಶೇಖರ್ ಮೂಲತಃ ಮಂಡ್ಯ ಜಿಲ್ಲೆಯ ನಾಗತಿಹಳ್ಳಿಯವರು. ತಂದೆ ತಿಮ್ಮಶೆಟ್ಟಿ ಗೌಡರು, ತಾಯಿ ಪಾರ್ವತಮ್ಮ. ಪ್ರಾರಂಭಿಕ ಶಿಕ್ಷಣವನ್ನು ತಮ್ಮಊರಾದ ನಾಗತಿಹಳ್ಳಿಯಲ್ಲಿ ಪಡೆದ ಅವರು ಮುಂದೆ ತಮ್ಮ ವಿದ್ಯಾಭ್ಯಾಸವನ್ನು ಮೈಸೂರಿನಲ್ಲಿ ಪೂರ್ಣಗೊಳಿಸಿದರು. ಸ್ನಾತಕೋತ್ತರ ಪದವಿಯನ್ನು ಹಲವಾರು ಸ್ವರ್ಣಪದಕಗಳೊಂದಿಗೆ ಗಳಿಸಿದ ಚಂದ್ರಶೇಖರ್ ತಮ್ಮ ಗ್ರಾಮ ನಾಗತಿಹಳ್ಳಿಯಲ್ಲಿ ‘ಅಭಿವ್ಯಕ್ತಿ ಸಾಂಸ್ಕೃತಿಕ ವೇದಿಕೆ’ಯನ್ನು ಆರಂಭಿಸಿದರು. ಜೊತೆಗೆ ಪ್ರತಿ ಯುಗಾದಿಯ ಸಂದರ್ಭದಲ್ಲಿ `ನಾಗತಿಹಳ್ಳಿ ಸಾಂಸ್ಕೃತಿಕ ಹಬ್ಬ’ಕ್ಕೆ ಸಹಾ ಚಾಲನೆ ನೀಡಿದರು. ಈ ವೇದಿಕೆಯ ಮೂಲಕ ಗ್ರಾಮದಲ್ಲಿ ಸುಸಜ್ಜಿತ ಗ್ರಂಥಾಲಯ, ರಂಗಮಂದಿರ, ಕಂಪ್ಯೂಟರ್ ಕೇಂದ್ರಗಳನ್ನು ತೆರೆಯುವ ಮೂಲಕ ಗ್ರಾಮೀಣ ಜನರ ಸಾಂಸ್ಕೃತಿಕ ಪ್ರಜ್ಞೆಯನ್ನು ಜಾಗೃತಿಗೊಳಿಸುವ ಕೆಲಸವನ್ನು ...
READ MORE