ಪ್ರಸಿದ್ದ ಕಾದಂಬರಿಕಾರ ಎಸ್.ಎಲ್.ಭೈರಪ್ಪನವರ ’ವಂಶವೃಕ್ಷ’ ಕಾದಂಬರಿ ಬದುಕಿನ ಬೇರುಗಳನ್ನು ಶೋಧಿಸುವ ಕೃತಿಯಾಗಿದೆ. ಬದುಕಿನ ಸೂಕ್ಷ್ಮ, ಸಂಕೀರ್ಣ ನೆಲೆಗಳ ಆಳಕ್ಕಿಳಿದು ಪ್ರಖರವಾದ ವೈಚಾರಿಕ, ತಾತ್ತ್ವಿಕ, ಮಾನವೀಯ ಅಂಶಗಳನ್ನು ಸಂವೇದನಾಶೀಲತೆಯಿಂದ ಶೋಧಿಸುವ ಕಾದಂಬರಿ ‘ವಂಶವೃಕ್ಷ’. ಈ ಕಾದಂಬರಿಯಲ್ಲಿ ಆಧ್ಯಾತ್ಮ, ವಿದವೆಯ ಮರು ಮದುವೆ, ಎರಡನೇ ಮದುವೆ, ಪ್ರೀತಿ, ಕಟ್ಟು ಪಾಡು ಎಲ್ಲವನ್ನು ಕಾದಂಬರಿಕಾರರು ಚಿತ್ರಿಸಿದ್ದಾರೆ. 1965 ಭಾರತದಲ್ಲಿ ವಿಧವೆಯ ಮರು ವಿವಾಹವೆಂದರೆ ಮೂಗು ಮುರಿಯುತ್ತಿದ್ದರು ಅಂಥ ಕಾಲದಲ್ಲಿ ಈ ಕಾದಂಬರಿಯನ್ನು ಬರೆದಿದ್ದಾರೆ. ಇಲ್ಲಿ ಬರುವ ಪಾತ್ರಗಳು ಸಮಾಜದ ಕಟ್ಟು ಪಾಡನ್ನು ಮುರಿದು ಹೊಸ ಜೀವನಕ್ಕೆ ನಾಂದಿ ಹಾಡುತ್ತಾರೆ.
ಈ ಕಾದಂಬರಿಯನ್ನು ಆಧರಿಸಿ ಬಿ.ವಿ. ಕಾರಂತ್ ಹಾಗೂ ಗಿರೀಶ್ ಕಾರ್ನಾಡ್ ಅವರು ’ವಂಶವೃಕ್ಷ’ ಚಲನಚಿತ್ರ ನಿರ್ದೇಶಿಸಿದರು. ಹಿಂದಿ, ಮರಾಠಿ, ಗುಜರಾತಿ, ತೆಲುಗು, ಉರ್ದು, ಇಂಗ್ಲಿಷ್ ಮೊದಲಾಗಿ ಹಲವು ಭಾಷೆಗಳಿಗೆ ಅನುವಾದಿತವಾಗಿ ಭಾರತದ ಶ್ರೇಷ್ಠ ಕಾದಂಬರಿಗಳಲ್ಲೊಂದು ಎಂಬ ಮನ್ನಣೆಯನ್ನು ಗಳಿಸಿಕೊಂಡಿದೆ.
ಜನಪ್ರಿಯ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಅವರು ಮೀಮಾಂಸಕರೂ ಹೌದು. ಹಾಸನ ಜಿಲ್ಲೆ ಚೆನ್ನರಾಯಪಟ್ಟಣದ ಸಂತೇಶಿವರ ಗ್ರಾಮದಲ್ಲಿ 1931ರ ಆಗಸ್ಟ್ 20ರಂದು ಜನಿಸಿದರು. ತಂದೆ ಲಿಂಗಣ್ಣಯ್ಯ- ತಾಯಿ ಗೌರಮ್ಮ. ತಮ್ಮ ಹುಟ್ಟೂರಿನ ಸುತ್ತಮುತ್ತಲ ಶಾಲೆಗಳಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಮುಗಿಸಿ ಮೈಸೂರಿಗೆ ಬಂದು ಶಾರದಾವಿಲಾಸ ಪ್ರೌಢಶಾಲೆಯಲ್ಲಿ ಓದಿ, ಮಹಾರಾಜ ಕಾಲೇಜಿನಲ್ಲಿ ಬಿ.ಎ. ಮಾಡಿ, ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ. ಪದವಿ ಗಳಿಸಿದರು. ಅನಂತರ ಹುಬ್ಬಳ್ಳಿಯ ಕಾಡುಸಿದ್ಧೇಶ್ವರ ಕಾಲೇಜಿನಲ್ಲಿ ಅಧ್ಯಾಪಕ (1958-60), ಗುಜರಾತಿನ ಸರ್ದಾರ್ ಪಟೇಲ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕ (1960-66), ದೆಹಲಿಯ ರಾಷ್ಟ್ರೀಯ ಶಿಕ್ಷಣ ಮತ್ತು ತರಬೇತಿ ಶಿಕ್ಷಣ ಸಂಸ್ಥೆಯಲ್ಲಿ ಉಪಪ್ರಾಧ್ಯಾಪಕ (1967-1971) ...
READ MOREಕರ್ನಾಟಕ ಸಾಹಿತ್ಯ ಅಕಾಡೆಮಿ 1963-64
ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ 1965