ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರು ‘ವಿಮರ್ಶೆ’ ಶೀರ್ಷಿಕೆಯಡಿ ಪ್ರಕಟಿಸಿರುವ ಕೃತಿಗಳ ಪೈಕಿ-ಇದು ಮೂರನೇಯದು. ಡೆವಿಡ್ ಮಹಾರಾಜನ ಕೀರ್ತನೆಗಳು, ಎಪಿಕ್ಟಿಟಸ್ ಗುರುವಿನ ಉಪದೇಶ, ಮಾರ್ಕಸ್ ಅರೀಲಿಯಸ್ ಚಕ್ರವರ್ತಿಯ ಆಲೋಚನೆ ಹಾಗೂ ಅಗಸ್ಟಿನ್ ಸಾಧುವಿನ ಭಿನ್ನಪ ಹೀಗೆ ನಾಲ್ಕು ಶೀರ್ಷಿಕೆಗಳಡಿ ವಿಮರ್ಶೆ ಲೇಖನಗಳನ್ನು ಈ ಕೃತಿ ಒಳಗೊಂಡಿದೆ.
‘ಶ್ರೀನಿವಾಸ’ ಕಾವ್ಯನಾಮದ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರು ಕನ್ನಡ ಸಣ್ಣಕತೆಗಳ ರಚನೆಗೆ ಖಚಿತ ರೂಪ ನೀಡುವುದಕ್ಕೆ ಕಾರಣರಾದ ಆದ್ಯರು. ಕೋಲಾರದ ಮಾಲೂರಿನ ಮಾಸ್ತಿ ಗ್ರಾಮದಲ್ಲಿ 1891ರ ಜೂನ್ 8ರಂದು ಜನಿಸಿದರು. ತಂದೆ ರಾಮಸ್ವಾಮಿ ಅಯ್ಯಂಗಾರ್ ತಾಯಿ ತಿರುಮಲ್ಲಮ್ಮ. ಪ್ರೌಢವಿದ್ಯಾಭ್ಯಾಸವನ್ನು ಮೈಸೂರಿನ ವೆಸ್ಲಿಯನ್ ಹೈಸ್ಕೂಲಿನಲ್ಲೂ, ಎಫ್.ಎ. ಅನ್ನು ಮಹಾರಾಜ ಕಾಲೇಜಿನಲ್ಲೂ ಮುಗಿಸಿ ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಬಿ.ಎ ಮುಗಿಸಿ ಮದರಾಸಿನ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಎಂಎ ಪದವಿ (1914) ಪಡೆದರು. ಮೈಸೂರು ಸರ್ಕಾರದ ಅಸಿಸ್ಟೆಂಟ್ ಕಮೀಷನರ್ (1914) ಆಗಿ ಕೆಲಸಕ್ಕೆ ಸೇರಿದರು. ಸರ್ ಎಂ. ವಿಶ್ವೇಶ್ವರಯ್ಯನವರ ಕೈಕೆಳಗೆ ಕೆಲಸ ಮಾಡಿದ ...
READ MORE