ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬದುಕು-ಸಾಧನೆಯನ್ನು ಕಟ್ಟಿಕೊಡುವ ಕೃತಿಯಿದು. ದಲಿತ ಕುಟುಂಬದಲ್ಲಿ ಹುಟ್ಟಿದ ಭೀಮರಾವ್ ಅವರು ನಡೆದ ಹಾದಿ ಸುಗಮವಾದದ್ದೇನಾಗಿರಲಿಲ್ಲ. ಅಮಾನವೀಯ ಸಾಮಾಜಿಕ ನಡವಳಿಕೆಗಳನ್ನು ಎದುರಿಸಿ ಬದುಕು ಕಟ್ಟಿಕೊಂಡದ್ದು ಮಾತ್ರವಲ್ಲ ಜಗತ್ತೇ ತನ್ನೆಡೆಗೆ ಬೆರಗಾಗಿ ನೋಡುವಂತೆ ಬೆಳೆದು ನಿಂತದ್ದು ಅತ್ಯದ್ಭುತ ಸಾಧನೆ. ಬಾಬಾ ಸಾಹೇಬರ ಬದುಕನ್ನು ಸರಳವಾಗಿ-ನೇರವಾಗಿ ಕಟ್ಟಿಕೊಡುವ ಪ್ರಯತ್ನವನ್ನು ಡಾ.ಎಚ್.ಎಸ್. ಅನುಪಮಾ ಅವರು ಮಾಡಿದ್ದಾರೆ.
ಲೇಖಕಿ, ಕವಯತ್ರಿ ಎಚ್.ಎಸ್.ಅನುಪಮಾ ಅವರು ವೃತ್ತಿಯಲ್ಲಿ ವೈದ್ಯೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕವಲಕ್ಕಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವೃತ್ತಿಯ ಜೊತೆಗೆ ಸಾಹಿತ್ಯ ಕ್ಷೇತ್ರದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಅವರು ಕಾಡುಹಕ್ಕಿಯ ಹಾಡು, ಸಹಗಮನ, ಬುದ್ಧ ಚರಿತೆ (ಖಂಡ ಕಾವ್ಯ), ನೆಗೆವ ಪಾದದ ಜಿಗಿತ, ಸಬರಮತಿ- ನೀಳ್ಗವಿತೆ ಎಂಬ ಐದು ಕವನ ಸಂಕಲನಗಳು, ಹೂವರಳಿದ್ದಕ್ಕೆ ಯಾಕೆ ಸಾಕ್ಷಿ?, ಚಿವುಟಿದಷ್ಟೂ ಚಿಗುರು, ಕೋವಿಡ್: ಡಾಕ್ಟರ್ ಡೈರಿ - ಗ್ರಾಮಭಾರತದ ಕಥೆಗಳು ಎಂಬ ಮೂರು ಕಥಾಸಂಕಲನಗಳು, ಡಾ. ಬಾಬಾಸಾಹೇಬ್ ಅಂಬೇಡ್ಕರ್ – ಕಿರು ಜೀವನ ಚರಿತ್ರೆ , ಮೋಚಕನ ಹೆಜ್ಜೆಗಳು - ಡಾ. ...
READ MORE