ಖ್ಯಾತ ಲೇಖಕ ಡಾ. ಬಾಬು ಕೃಷ್ಣಮೂರ್ತಿ ಅವರ ಕೃತಿ-ವಿಶಿಷ್ಟ. ವಿಶಿಷ್ಠಾದ್ವೈತ ಸಿದ್ಧಾಂತದ ಪ್ರತಿಪಾದಕ ಶ್ರೀ ರಾಮಾನುಜಾಚಾರ್ಯರ ಜೀವನ ಆಧರಿತ ಕಾದಂಬರಿ. ಶಂಕರಾಚಾರ್ಯರು ಅದ್ವೈತ, ಮಧ್ವಾಚಾರ್ಯರು ದ್ವೈತ ಹಾಗೂ ಶ್ರೀರಾಮಾನುಜಾಚಾರ್ಯರು ವಿಶಿಷ್ಟಾದ್ವೈತ ಸಿದ್ಧಾಂತದ ಪ್ರತಿಪಾದಕರು. ದ್ವೈತ-ಅದ್ವೈತ ಮಧ್ಯೆ ಸಮಾನ ಆಂತರ ಕಾಯ್ದುಕೊಂಡು ವಿಶಿಷ್ಟಾದ್ವೈತ ಸಿದ್ಧಾಂತವನ್ನು ಒಪ್ಪಿದ ಅನುಯಾಯಿಗಳೇ ಹೆಚ್ಚು. ಹೀಗಾಗಿ, ಶ್ರೀರಾಮಾನುಜಾಚಾರ್ಯರ ವಿಶಿಷ್ಟಾದ್ವೈತ ಸಿದ್ಧಾಂತವು ಪ್ರಾಮುಖ್ಯತೆ ಪಡೆದಿದೆ. ಶ್ರೀ ರಾಮಾನುಜಾಚಾರ್ಯರ ಬದುಕು- ಚಿಂತನೆ, ಪ್ರತಿಪಾದನಾ ರೀತಿ ಎಲ್ಲವನ್ನೂ ಲೇಖಕರು ಸವಿವರವಾಗಿ ಕಾದಂಬರಿ ರೂಪದಲ್ಲಿ ದಾಖಲಿಸಿದ್ದೇ ಈ ಕೃತಿ.
ಸಾಹಿತ್ಯ, ಪತ್ರಿಕೋದ್ಯಮ ಎರಡು ಕ್ಷೇತ್ರಗಳಲ್ಲೂ ಚಿರಪರಿಚಿತರಾದ ಬಾಬು ಕೃಷ್ಣಮೂರ್ತಿ ಹುಟ್ಟಿದ್ದು ಬೆಂಗಳೂರು. ಸಾಹಿತ್ಯ ಹಾಗೂ ಪತ್ರಿಕೋದ್ಯಮದಲ್ಲಿ ಅತೀವ ಆಸಕ್ತಿ. ಅವರ ಸಂಪಾದಕತ್ವದಲ್ಲಿ ಬಾಲಮಂಗಳ (ಪಾಕ್ಷಿಕ), ಬಾಲಮಂಗಳ ಚಿತ್ರಕಥಾ (ಮಕ್ಕಳ ವ್ಯಂಗ್ಯ ಚಿತ್ರ ಪಾಕ್ಷಿಕ), ಗಿಳಿವಿಂಡು (ಶಿಶು ಪಾಕ್ಷಿಕ ಪತ್ರಿಕೆ) ಪ್ರಕಟವಾಗಿವೆ. ಇವರು ರಚಿಸಿದ ಸ್ವಾತಂತ್ರ್ಯವೀರ ಚಂದ್ರಶೇಖರ ಆಜಾದ್ ಕುರಿತು ಆರು ವರ್ಷ ಕಾಲ ಸಂಶೋಧನೆ, ಸ್ಥಳವೀಕ್ಷಣೆ ನಡೆಸಿ ರಚಿಸಿದ ಕೃತಿ ‘ಅಜೇಯ’. ಅವರ ಪ್ರಮುಖ ಕೃತಿಗಳು - ಅಜೇಯ (1974), ಸಿಡಿಮದ್ದು ನೆತ್ತರು ನೇಣುಗಂಬ (1984), ಅದಮ್ಯ (1984), ರುಧಿರಾಭಿಷೇಕ (2005), ಡಾ. ಸಿ.ಜಿ. ಶಾಸ್ತಿಒಂದು ಯಶೋಗಾಥೆ (2007), 1857-ಭಾರತದ ಸ್ವಾತಂತ್ರ್ಯ ಸಂಗ್ರಾಮ (2007), ...
READ MORE