ಲೇಖಕ ಡಾ. ಕರೀಗೌಡ ಬೀಚನಹಳ್ಳಿ ಅವರ ಬರೆದ ವಿಮರ್ಶಾ ಲೇಖನಗಳ ಸಂಗ್ರಹ ಕೃತಿ-ವಿಸ್ತಾರ. ಕನ್ನಡದ ಉತ್ತಮೋತ್ತಮ ಕೃತಿಗಳು ಆಯ್ದು ಅವುಗಳ ಸಾಹಿತ್ಯ, ತಂತ್ರ, ನಿರೂಪಣೆ, ಶೈಲಿ ಎಲ್ಲವನ್ನೂ ವಿಮರ್ಶೆಗೆ ಒಳಪಡಿಸುವ ಮೂಳಕ ಕನ್ನಡ ಸಾಹಿತ್ಯದಲ್ಲಿ ಬರುತ್ತಿರುವ ಹಾಗೂ ಈಗಾಗಲೇ ಬಂದ ಕೃತಿಗಳ ಗುಣಮಟ್ಟವನ್ನು ವಿಶ್ಲೇಷಿಸುವುದು ಈ ಕೃತಿಯ ಉದ್ದೇಶ. ಇಲ್ಲಿಯ ವಿಮರ್ಶಾ ಬರಹಗಳು ತಮ್ಮ ತೀಕ್ಷ್ಣತೆಯಿಂದಾಗಿ ಓದುಗರನ್ನು ಸೆಳೆಯುತ್ತವೆ.
ಕರೀಗೌಡ ಬೀಚನಹಳ್ಳಿ ಅವರು 1951 ಸೆಪ್ಟೆಂಬರ್ 10ರಂದು ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಬೀಚನಹಳ್ಳಿಯಲ್ಲಿ ಜನಿಸಿದರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದ ಇವರು, ವ್ಯಷ್ಟಿ-ಸಮಷ್ಟಿ ಪ್ರಬಂಧ ಮಂಡಿಸಿ ಪಿಎಚ್‌ಡಿ ಪದವಿಯನ್ನು ಪಡೆದಿದ್ದಾರೆ. .ಬೆಂಗಳೂರು ವಿಶ್ವವಿದ್ಯಾಲಯದ ಪ್ರಸಾರಂಗದಲ್ಲಿ ಕಾರ್ಯ ನಿರ್ವಹಿಸಿದ ನಿವರು, ಹಂಪಿ ವಿಶ್ವವಿದ್ಯಾಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿ, ಪ್ರಸಾರಂಗದ ನಿರ್ದೇಶಕರಾಗಿ ನಂತರ ಕುಲಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಕನ್ನಡ ಸಾಹಿತ್ಯದೆಡೆಗಿನ ಒಲವು ಕಾಲೇಜು ದಿನಗಳಿಂದಲೇ ಸಾಹಿತ್ಯ ಕೃಷಿಯಲ್ಲಿ ತೊಡಗುವಂತೆ ಮಾಡಿತ್ತು. ಇವರು ಬರೆದ ಕಥೆ, ಕವನಗಳು ತುಮಕೂರು ವಿಶ್ವವಿದ್ಯಾಲಯ ಪದವಿ ತರಗತಿಗಳಿಗೆ ಪಠ್ಯವಾಗಿವೆ. ಇವರ ಕಥೆಗಳು ...
READ MORE