Date: 13-11-2024
Location: ಬೆಂಗಳೂರು
ಬೆಂಗಳೂರು: ರಾಷ್ಟ್ರೀಯ ವೇದವಿಜ್ಞಾನ ಸಂಸ್ಥೆ ಟ್ರಸ್ಟ್ ವತಿಯಿಂದ ಪೂರ್ಣಪ್ರಜ್ಞ ವಿದ್ಯಾಪೀಠ ಹತ್ತಿರದ ಐಟಿಐ ಬಡಾವಣೆಯಲ್ಲಿರುವ ಶ್ರೀಕೃಷ್ಣ ಸಮೂಹ ವಿದ್ಯಾ ಸಂಸ್ಥೆಯಲ್ಲಿ ನವೆಂಬರ್ 17ರಿಂದ 18ರವರೆಗೆ ಆರನೇ ಅಖಿಲ ಭಾರತ ಹರಿದಾಸ ಸಾಹಿತ್ಯ ಸಮ್ಮೇಳನ ಹಮ್ಮಿ- ಕೊಳ್ಳಲಾಗಿದೆ.
'ಎರಡು ದಿನದ ಈ ಸಮ್ಮೇಳನದಲ್ಲಿ ವಿವಿಧ ಅಧಿವೇಶನಗಳು ನಡೆಯಲಿವೆ. ಬಾಳಗಾರು ಮಠದ ಅಶೋಭರಾಮಪ್ರಿಯತೀರ್ಥ ಸ್ವಾಮೀಜಿ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ರಾಷ್ಟ್ರೀಯ ವೇದವಿಜ್ಞಾನ ಸಂಸ್ಥೆ ಟ್ರಸ್ಟ್ನ ಉಪಾಧ್ಯಕ್ಷ ಅರಳುಮಲ್ಲಿಗೆ ಪಾರ್ಥಸಾರಥಿ ಅವರು ಸಮ್ಮೇಳನಾಧ್ಯಕ್ಷತೆಯನ್ನು ವಹಿಸಲಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾ- ಲಯದ ಕುಲಪತಿ ಡಿ.ವಿ. ಪರಮಶಿವಮೂರ್ತಿ, ಅಮೆರಿಕದ ಯೋಗ ಸಂಸ್ಕೃತಂ ವಿಶ್ವವಿದ್ಯಾ- ಲಯದ ಕುಲಪತಿ ಬಿ. ವೆಂಕಟಕೃಷ್ಣ ಶಾಸ್ತ್ರಿ ಭಾಗವಹಿಸಲಿದ್ದಾರೆ' ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರಸ್ಟ್ನ ಕಾರ್ಯದರ್ಶಿ ಎಚ್.ಬಿ.ಲಕ್ಷ್ಮೀ- ನಾರಾಯಣ ಅವರು ಹೇಳಿದರು.
ಪತ್ರಕರ್ತ ಎಸ್.ಕೆ. ಶೇಷಚಂದ್ರಿಕಾ ಮತ್ತು ಹರಿದಾಸ ಸಾಹಿತ್ಯಕ್ಕೆ ಸೇವೆ ಸಲ್ಲಿಸಿರುವ ಬಿ. ಸತ್ಯನಾರಾಯಣಚಾರ್ಯ, ಜಯಲಕ್ಷ್ಮಿ ಮಂಗಳಮೂರ್ತಿ, ಹ.ರಾ. ನಾಗರಾಜಾಚಾರ್ಯ ಸೇರಿದಂತೆ ಹಲವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
“ಈ ಸಂಕಲನ ಮಲೆಯ ಮಹದೇಶ್ವರದ ತಪ್ಪಲಿನ ಗುಡ್ಡಗಾಡು ಜನರ ಬದುಕುಗಳ ಚಿತ್ರಣಗಳನ್ನು ಬಲು ನಿಖರವಾಗಿ ಕೊಡುತ್ತದೆ&rdqu...
“ಪತ್ರಿಕೋದ್ಯಮದಲ್ಲಿ ವರದಿಗಾರಿಕೆ ಎನ್ನುವುದು ವಾಸ್ತವಾಂಶಗಳನ್ನು ಜಾಗರೂಕವಾಗಿ, ನಿಖರವಾಗಿ ಮರು ಸೃಷ್ಟಿಸುವ ಕಲೆ&...
“ಭೂತಾಯಿಯ ಹೊರತಾಗಿ ಬಂದ ಕವನಗಳನ್ನೆಲ್ಲಾ ಸೇರಿಸಿ ಪ್ರತ್ಯೇಕವಾದ ಒಂದು ಕವನ ಸಂಕಲನವನ್ನು ಹೊರ ತರುವ ಆಲೋಚನೆ ಮನಸ್...
©2024 Book Brahma Private Limited.