ಗಾನವೊಂದು ಮೌನವಾಗಿ ಜ್ಯೋತಿಯೊಂದು ಅನಂತದೊಳಗೆ ಲೀನವಾದ ದಿನ


"ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಆಧುನಿಕ ಭಾರತದ ನಿರ್ಮಾತೃ, ಸ್ವತಂತ್ರ ಭಾರತದ ಮೊದಲ ಪ್ರಧಾನಿ ಪಂಡಿತ್‌ ಜವಾಹರಲಾಲ್ ನೆಹರೂ ಅವರು 27 ಮೇ 1964ರಲ್ಲಿ ನಮ್ಮನ್ನು ಅಗಲಿದಾಗ, ಅಂದಿನ ರಾಜ್ಯಸಭಾ ಸದಸ್ಯರಾಗಿದ್ದ ಭಾರತೀಯ ಜನಸಂಘದ (ಇಂದಿನ ಬಿಜೆಪಿಯ ಪೂರ್ವರೂಪ) ಅಟಲ್ ಬಿಹಾರಿ ವಾಜಪೇಯಿಯವರು ರಾಜ್ಯಸಭೆಯಲ್ಲಿ ಮಾಡಿದ್ದಭಾಷಣ ತುಣುಕು" ಲೇಖಕ ಮುರಳಿ ಮೋಹನ್‌ ಕಾಟಿ, ಸತೀಶ್‌ ನಾಯಕ ಅವರ ಸಂಪಾದಿತನೆಹರು ನಡಿಗೆ ’ಕೃತಿಯ ಆಯ್ದ ಭಾಗ ನಿಮ್ಮ ಓದಿಗಾಗಿ...

ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಆಧುನಿಕ ಭಾರತದ ನಿರ್ಮಾತೃ, ಸ್ವತಂತ್ರ ಭಾರತದ ಮೊದಲ ಪ್ರಧಾನಿ ಶ್ರೀ ಪಂಡಿತ್‌ ಜವಾಹರಲಾಲ್ ನೆಹರೂ ಅವರು 27 ಮೇ 1964ರಲ್ಲಿ ನಮ್ಮನ್ನು ಅಗಲಿದಾಗ, ಅಂದಿನ ರಾಜ್ಯಸಭಾ ಸದಸ್ಯರಾಗಿದ್ದ ಭಾರತೀಯ ಜನಸಂಘದ (ಇಂದಿನ ಬಿಜೆಪಿಯ ಪೂರ್ವರೂಪ) ಶ್ರೀ ಅಟಲ್ ಬಿಹಾರಿ ವಾಜಪೇಯಿಯವರು ರಾಜ್ಯಸಭೆಯಲ್ಲಿ ಮಾಡಿದ್ದ ಭಾಷಣ ಹೀಗಿದೆ.....

ಅಧ್ಯಕ್ಷ ಮಹೋದಯರೇ, ಇವತ್ತು ಕನಸೊಂದು ಛಿದ್ರವಾಗಿದೆ; ಗಾನವೊಂದು ಮೌನವಾಗಿದೆ; ಜ್ಯೋತಿಯೊಂದು ಅನಂತದೊಳಗೆ ಲೀನವಾಗಿದೆ. ಹಸಿವುಮುಕ್ತ ಮತ್ತು ಭಯರಹಿತ ಜಗತ್ತನ್ನು ಸೃಷ್ಟಿಸಬೇಕೆಂಬ ಕನಸಾಗಿತ್ತು ಅದು. ಗೀತೆಯ ಸಾರವನ್ನು ಧ್ವನಿಸುತ್ತಿದ್ದ, ಗುಲಾಬಿಯ ಸುಗಂಧವನ್ನು ಪಸರಿಸುತ್ತಿದ್ದ ಗಾನವಾಗಿತ್ತು ಅದು. ರಾತ್ರಿಯಿಡೀ ನಿರಂತರವಾಗಿ ಜ್ವಲಿಸುತ್ತಾ, ಪ್ರತಿ ಅಂಧಕಾರದೊಂದಿಗೆ ಹೋರಾಡಿ ನಮಗೆ ದಾರಿತೋರಿ, ಬೆಳಗಿನ ಜಾವದ ಹೊತ್ತಿಗೆ ಸರಿಯಾಗಿ ನಿರ್ವಾಣಹೊಂದಿದ ಜ್ಯೋತಿ ಅದು.

ಹೌದು, ಸಾವು ನಿಶ್ಚಿತ; ದೇಹ ನಶ್ವರ, ಶ್ರೀಗಂಧದ ಚಿತೆಯ ಜ್ವಾಲೆಗೆ ನಿನ್ನೆ ನಾವು ಅರ್ಪಿಸಿದ ಆ ಸ್ವರ್ಣ ದೇಹ ಕೂಡಾ ಕೊನೆ ಉಳ್ಳಂತದ್ದೆ, ಆದರೆ ಸಾವು ಇಷ್ಟೊಂದು ಕದೀಮನಾಗಬಹುದೇ? ನಾವು ಸ್ನೇಹಿತರೆಲ್ಲ ನಿದ್ರಿಸುತ್ತಿದ್ದಾಗ, ಅಂಗರಕ್ಷಕರೆಲ್ಲ ಮೈಮರೆತಿದ್ದಾಗ, ಸಟ್ಟನೆ ದಾಳಿ ಮಾಡಿ ನಮ್ಮ ಜೀವನದಲ್ಲಿ ನಮಗೆ ಸಿಕ್ಕಿದ್ದ ಒಂದು ಬೆಲೆಕಟ್ಟಲಾಗದ ಉಡುಗೊರೆಯನ್ನು ಕದ್ದೊಯ್ದಿದೆಯಲ್ಲ.

MORE FEATURES

ವರ್ತಮಾನ ಸಾಯುತ್ತಲೇ ಭೂತವಾಗುತ್ತದೆ

07-01-2025 ಬೆಂಗಳೂರು

"ಸಾಹಿತಿ ಶರೀಫ ಗಂಗಪ್ಪ ಚಿಗಳ್ಳಿ ಇವರು ಈ ಪುಸ್ತಕದಲ್ಲಿ 15 ಲೇಖನ ಬರೆದಿದ್ದಾರೆ. ಬಹುತೇಕ ಕನ್ನಡಿಗರು ಕೇಳಬಲ್ಲ, ನ...

ಕೃಷ್ಣಮೂರ್ತಿಯವರು ಸೂಕ್ಷ್ಮಗ್ರಹಿಕೆಯ ಲೇಖಕರು

07-01-2025 ಬೆಂಗಳೂರು

“ವ್ಯಂಗ್ಯ-ಕುಹಕಗಳ ಸೋಂಕಿಲ್ಲದಂತೆ ತಾವು ನಡೆದುಬಂದ ಹಾದಿಯಲ್ಲಿ ದಾರಿದೀಪಗಳಂತಿದ್ದ ಗುರು-ಹಿರಿಯರಿಗೆ ನುಡಿಗೌರವ ಸ...

ತಮ್ಮ ವಿನಾಶ ಮಾತ್ರ ಅಂಗೈ ಗೆರೆಗಳಷ್ಟೇ ಸ್ಪಷ್ಟ

07-01-2025 ಬೆಂಗಳೂರು

“ನಮ್ಮೊಳಗಿನ ಮನುಷ್ಯತ್ವವನ್ನು ಬಡಿದೆಬ್ಬಿಸುತ್ತವೆ. ಇಂಥಾ ಜೀವಂತ ಜ್ವಾಲಾಮುಖಿಗಳಂಥ ಕಥೆಗಳನ್ನು ಓದಿದಾಗ, ನನ್ನಿಂ...