ಆರನೇ ಅಖಿಲ ಭಾರತ ಹರಿದಾಸ ಸಾಹಿತ್ಯ ಸಮ್ಮೇಳನ ಹ

Date: 13-11-2024

Location: ಬೆಂಗಳೂರು


ಬೆಂಗಳೂರು: ರಾಷ್ಟ್ರೀಯ ವೇದವಿಜ್ಞಾನ ಸಂಸ್ಥೆ ಟ್ರಸ್ಟ್ ವತಿಯಿಂದ ಪೂರ್ಣಪ್ರಜ್ಞ ವಿದ್ಯಾಪೀಠ ಹತ್ತಿರದ ಐಟಿಐ ಬಡಾವಣೆಯಲ್ಲಿರುವ ಶ್ರೀಕೃಷ್ಣ ಸಮೂಹ ವಿದ್ಯಾ ಸಂಸ್ಥೆಯಲ್ಲಿ ನವೆಂಬರ್ 17ರಿಂದ 18ರವರೆಗೆ ಆರನೇ ಅಖಿಲ ಭಾರತ ಹರಿದಾಸ ಸಾಹಿತ್ಯ ಸಮ್ಮೇಳನ ಹಮ್ಮಿ- ಕೊಳ್ಳಲಾಗಿದೆ.

'ಎರಡು ದಿನದ ಈ ಸಮ್ಮೇಳನದಲ್ಲಿ ವಿವಿಧ ಅಧಿವೇಶನಗಳು ನಡೆಯಲಿವೆ. ಬಾಳಗಾರು ಮಠದ ಅಶೋಭರಾಮಪ್ರಿಯತೀರ್ಥ ಸ್ವಾಮೀಜಿ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ರಾಷ್ಟ್ರೀಯ ವೇದವಿಜ್ಞಾನ ಸಂಸ್ಥೆ ಟ್ರಸ್ಟ್‌ನ ಉಪಾಧ್ಯಕ್ಷ ಅರಳುಮಲ್ಲಿಗೆ ಪಾರ್ಥಸಾರಥಿ ಅವರು ಸಮ್ಮೇಳನಾಧ್ಯಕ್ಷತೆಯನ್ನು ವಹಿಸಲಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾ- ಲಯದ ಕುಲಪತಿ ಡಿ.ವಿ. ಪರಮಶಿವಮೂರ್ತಿ, ಅಮೆರಿಕದ ಯೋಗ ಸಂಸ್ಕೃತಂ ವಿಶ್ವವಿದ್ಯಾ- ಲಯದ ಕುಲಪತಿ ಬಿ. ವೆಂಕಟಕೃಷ್ಣ ಶಾಸ್ತ್ರಿ ಭಾಗವಹಿಸಲಿದ್ದಾರೆ' ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರಸ್ಟ್‌ನ ಕಾರ್ಯದರ್ಶಿ ಎಚ್.ಬಿ.ಲಕ್ಷ್ಮೀ- ನಾರಾಯಣ ಅವರು ಹೇಳಿದರು.

ಪತ್ರಕರ್ತ ಎಸ್.ಕೆ. ಶೇಷಚಂದ್ರಿಕಾ ಮತ್ತು ಹರಿದಾಸ ಸಾಹಿತ್ಯಕ್ಕೆ ಸೇವೆ ಸಲ್ಲಿಸಿರುವ ಬಿ. ಸತ್ಯನಾರಾಯಣಚಾರ್ಯ, ಜಯಲಕ್ಷ್ಮಿ ಮಂಗಳಮೂರ್ತಿ, ಹ.ರಾ. ನಾಗರಾಜಾಚಾರ್ಯ ಸೇರಿದಂತೆ ಹಲವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

MORE NEWS

ಈ ಕಥಾ ಸಂಕಲನದಲ್ಲಿ ದಟ್ಟ ಕಾಡಿನ ರೌದ್ರ ವರ್ಣನೆ ಓದುಗರನ್ನು ಮೋಹಗೊಳಿಸುತ್ತದೆ‌

22-10-2024 ಬೆಂಗಳೂರು

“ಈ ಸಂಕಲನ ಮಲೆಯ ಮಹದೇಶ್ವರದ ತಪ್ಪಲಿನ ಗುಡ್ಡಗಾಡು ಜನರ ಬದುಕುಗಳ ಚಿತ್ರಣಗಳನ್ನು ಬಲು ನಿಖರವಾಗಿ ಕೊಡುತ್ತದೆ&rdqu...

ಈ ಕೃತಿ ಶ್ರೀಧರ ನಾಯಕ್ ಅವರ ಆತ್ಮಚರಿತ್ರೆಯ ಆಯ್ದ ಭಾಗವಿದ್ದಂತೆ

15-10-2024 ಬೆಂಗಳೂರು

“ಪತ್ರಿಕೋದ್ಯಮದಲ್ಲಿ ವರದಿಗಾರಿಕೆ ಎನ್ನುವುದು ವಾಸ್ತವಾಂಶಗಳನ್ನು ಜಾಗರೂಕವಾಗಿ, ನಿಖರವಾಗಿ ಮರು ಸೃಷ್ಟಿಸುವ ಕಲೆ&...

ಈ ಕವನ ಸಂಕಲನದಲ್ಲಿ ಬೇರೆ ಬೇರೆ ಆಸಕ್ತಿಯ ವಿಚಾರಗಳನ್ನು ಕಾಣಬಹುದು

15-10-2024 ಬೆಂಗಳೂರು

“ಭೂತಾಯಿಯ ಹೊರತಾಗಿ ಬಂದ ಕವನಗಳನ್ನೆಲ್ಲಾ ಸೇರಿಸಿ ಪ್ರತ್ಯೇಕವಾದ ಒಂದು ಕವನ ಸಂಕಲನವನ್ನು ಹೊರ ತರುವ ಆಲೋಚನೆ ಮನಸ್...