Date: 22-12-2024
Location: ಮಂಡ್ಯ
ಕನ್ನಡ ಸಾಹಿತ್ಯ ಪರಿಷತ್ತಿನ ಸಭೆಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಯಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಬಳ್ಳಾರಿ, ಕೋಲಾರ, ಯಾದಗಿರಿ ಜಿಲ್ಲೆಗಳು ಅತಿಥ್ಯಕ್ಕೆ ಅರ್ಜಿ ಸಲ್ಲಿಸಿದ್ದವು. ಆದರೆ, 66 ವರ್ಷಗಳ ಬಳಿಕ ಮತ್ತೆ ಬಳ್ಳಾರಿಗೆ ಈ ಸಮ್ಮೇಳನದ ಅವಕಾಶ ದೊರೆತಿದೆ.
ಮಂಡ್ಯ: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಗಡಿನಾಡು ಬಳ್ಳಾರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಈ ಮೂಲಕ 68 ವರ್ಷಗಳ ಬಳಿಕ ಗಣಿನಾಡಿಗೆ ನುಡಿತೇರು ಎಳೆಯುವ ಅವಕಾಶ ಸಿಕ್ಕಂತಾಗಿದೆ.
ಕಸಾಪ ಪ್ರತಿನಿಧಿಗಳ ಸಭೆಯಲ್ಲಿ ಗಡಿನಾಡು ಬಳ್ಳಾರಿಯಲ್ಲಿ ಮುಂದಿನ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ನಡೆಸಲು ಸರ್ವಾನುಮತದಿಂದ ನಿರ್ಣಯಿಸಲಾಯಿತು. ಕಳೆದ ಬಾರಿ ಹಾವೇರಿಯಲ್ಲಿ ನಡೆದ ಅಖಿಲ ಭಾರತ ಸಮ್ಮೇಳನದಲ್ಲಿ 87ನೇ ಸಮ್ಮೇಳನ ಬಳ್ಳಾರಿಗೆ ನೀಡಬೇಕು ಎಂಬ ತೀವ್ರ ಒತ್ತಾಯ ಕೇಳಿಬಂತು. ಆದರೆ ಕೊನೆ ಗಳಿಗೆಯಲ್ಲಿ ಮಂಡ್ಯದಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಯಿತು. ಈ ಬಾರಿ ಚಿಕ್ಕಮಗಳೂರು, ಬಳ್ಳಾರಿ ಅಥವಾ ದೆಹಲಿಯಲ್ಲಿ ಸಮ್ಮೇಳನ ನಡೆಸುವ ಕುರಿತು ಚರ್ಚೆಗಳು ಸಾಗಿದ್ದವು.
ಆದರೆ ಅಂತಿಮವಾಗಿ ಮುಂದಿನ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ನಡೆಸಲು ತೀರ್ಮಾನಿಸಿರುವುದು ಬಿಸಿಲೂರು ಜನರಲ್ಲಿ ಸಂತಸ ತಂದಿದೆ. 1926 ಹಾಗೂ 1938ರಲ್ಲಿ ಬಳ್ಳಾರಿಯಲ್ಲಿ ಸಮ್ಮೇಳನ ನಡೆದಿತ್ತು. ಸ್ವಾತಂತ್ರ್ಯಾನಂತರ 1958 ರಲ್ಲಿ ವಿ.ಕೃ.ಗೋಕಾಕ್ ಅವರ ಅಧ್ಯಕ್ಷತೆಯಲ್ಲಿ ಬಳ್ಳಾರಿಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಸಮ್ಮೇಳನ ಅರ್ಥಪೂರ್ಣವಾಗಿ ನಡೆದಿತ್ತು. ಸುದೀರ್ಘ 66 ವರ್ಷಗಳ ಬಳಿಕ ಬಳ್ಳಾರಿಗೆ ಸಾಹಿತ್ಯ ಸಮ್ಮೇಳನದ ಅವಕಾಶ ದಕ್ಕಿದೆ.
ಮಂಡ್ಯ: ವಿದೇಶದಲ್ಲಿ 40 ಲಕ್ಷಕ್ಕೂ ಅಧಿಕ ಕನ್ನಡಿಗರಿದ್ದು ಅವರಲ್ಲಿ 5 ಲಕ್ಷಕ್ಕೂ ಅಧಿಕ ಕನ್ನಡಿಗರು ಅಮೆರಿಕಾದಲ್ಲೇ ಇದ್ದ...
ಮಂಡ್ಯ: 100 ವರ್ಷ ಪೂರೈಸಿದ ಶಾಲೆಗಳಿಗೆ ಆಟದ ಮೈದಾನ ಇತ್ತು. ಇಂದು ಅವು ಇಲ್ಲ. ಸ್ಥಳೀಯ ರಾಜಕಾಣಿಗಳ, ಪ್ರಭಾವಿಗಳ ...
ಮಂಡ್ಯ: ಮಳೆ ತೇವವನ್ನು ಹೊತ್ತಿಟ್ಟ ದಾರಿ, ಕಾಲುಜಾರಿ ಬಿದ್ದ ಪುಟಗಳ ಕಥೆಗಳಂತಿದ್ದವು. ಜನರು ಗಲುಬೆ ಗದ್ದಲಗಳ ನಡುವೆ ಪುಸ...
©2024 Book Brahma Private Limited.