Date: 07-10-2024
Location: ಬೆಂಗಳೂರು
ಕಲಬುರಗಿ: ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ 23ನೇ ವರ್ಷದ `ಅಮ್ಮ ಪ್ರಶಸ್ತಿ’ಗಾಗಿ 2023 ಮತ್ತು 2024ನೇ ಸಾಲಿನಲ್ಲಿ ಪ್ರಕಟವಾದ ಕೃತಿಗಳನ್ನು ಆಹ್ವಾನಿಸಲಾಗಿದೆ ಎಂದು ಪ್ರತಿಷ್ಠಾನದ ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ತಿಳಿಸಿದ್ದಾರೆ.
“ಅಮ್ಮ ಪ್ರಶಸ್ತಿ”ಗಾಗಿ ಸಾಹಿತ್ಯದ ಯಾವುದೇ ಪ್ರಕಾರದ ಕೃತಿಗಳ ಎರಡು ಪ್ರತಿಗಳನ್ನು ಅಕ್ಟೋಬರ್ 30 ರ ಒಳಗೆ ಕಳುಹಿಸಬೇಕು.ಆಯ್ಕೆಯಾದ 5 ಕೃತಿಗಳಿಗೆ ತಲಾ 5 ಸಾವಿರ ನಗದು ಪುರಸ್ಕಾರ ಮತ್ತು ಸನ್ಮಾನ, ಗೌರವದ ಕಾಣಿಕೆ ನೀಡಿ ಸತ್ಕರಿಸಲಾಗುವುದು ಎಂದು ತಿಳಿಸಿದ್ದಾರೆ.
ಕೃತಿಗಳನ್ನು ಕಳುಹಿಸಬೇಕಾದ ವಿಳಾಸ : ಶ್ರೀಮತಿ ರತ್ನಕಲಾ ಮಹಿಪಾಲರೆಡ್ಡಿ ಮುನ್ನೂರ್, ಸಂಚಾಲಕಿ, ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ "ಅಮ್ಮ ನಿಲಯ", ರಾಮಚಂದ್ರ ಲೇಔಟ್, ಪಿಡಬ್ಲೂö್ಯಡಿ ಕಚೇರಿ ಹತ್ತಿರ, ಸೇಡಂ - 585222. ಕಲಬುರಗಿ ಜಿಲ್ಲೆ. ಹೆಚ್ಚಿನ ವಿವರಗಳಿಗಾಗಿ, ಮೊಬೈಲ್ ಸಂಖ್ಯೆ: 9731666052 ಅನ್ನು ಸಂಪರ್ಕಿಸಬಹುದು.
ಕಳೆದ ವರ್ಷ ‘ಕರಟಕ ದಮನಕ’ ಚಿತ್ರದಲ್ಲಿ ಕಾಣಿಸಿಕೊಂಡು ಮರೆಯಾಗಿದ್ದ ಬಹುಭಾಷಾ ನಟಿ ಪ್ರಿಯಾ ಆನಂದ್, ಇ...
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನಟ ಶಿವರಾಜಕುಮಾರ್, ಇದೀಗ ಕ್ಯಾನ್ಸರ್ ಮುಕ್ತರಾಗಿದ್ದಾರೆ. ಹೊಸ ವರ್ಷದ ಮೊದಲ ದಿನ ...
ಬೆಂಗಳೂರು: ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಠ ಸಾಧನೆ ಮಾಡಿದ ಪತ್ರಕ...
©2025 Book Brahma Private Limited.