ಅನಿತಾ ಪಿ. ತಾಕೊಡೆ ಅವರ ಸುವರ್ಣಯುಗ ಕೃತಿಗೆ ‘ವಿಕಾಸ ಪುಸ್ತಕ ಬಹುಮಾನ’ 

Date: 06-01-2025

Location: ಬೆಂಗಳೂರು


ಮುಂಬಯಿ: ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನದಿಂದ ಕೊಡಮಾಡುವ 2023-24ನೇ ಸಾಲಿನ ‘ವಿಕಾಸ ಪುಸ್ತಕ ಬಹುಮಾನ’ಕ್ಕೆ ಅನಿತಾ ಪಿ. ತಾಕೊಡೆ ಅವರ ಸುವರ್ಣಯುಗ ಕೃತಿ ಆಯ್ಕೆಯಾಗಿದೆ.

ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆ ಇದಾಗಿದ್ದು, ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಜಿ.ಎನ್.ಉಪಾಧ್ಯ, ಪ್ರತಿಷ್ಠಾನದ ಸಂಸ್ಥಾಪಕರಾದ ಡಾ.ವಿಶ್ವನಾಥ ಕಾರ್ನಾಡ್, ಕೋಶಾಧಿಕಾರಿ ಶರತ್ ಕಾರ್ನಾಡ್ ಅವರ ಉಪಸ್ಥಿತಿಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು.

ಈ ಪುರಸ್ಕಾರವು ನಗದು ಪುರಸ್ಕಾರ, ಪ್ರಶಸ್ತಿ ಪತ್ರ ಹಾಗೂ ಗ್ರಂಥ ಗೌರವವನ್ನು ಒಳಗೊಂಡಿದ್ದು ಫೆಬ್ರವರಿ ತಿಂಗಳಲ್ಲಿ ಮುಂಬೈ ವಿಶ್ವವಿದ್ಯಾಲಯದಲ್ಲಿ ಈ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ ಎಂಬುದಾಗಿ ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.

 

 

MORE NEWS

Unlock Raghava; ಶಿವಮೊಗ್ಗದ ಭಾರತ್ ಸಿನಿಮಾಸ್‍ನಲ್ಲಿ ಬಿಡುಗಡೆ ಆಯಿತು ‘ಲಾಕ್ ಲಾಕ್’ ಹಾಡು

08-01-2025 ಬೆಂಗಳೂರು

ಮಿಲಿಂದ್‍ ಮತ್ತು ರಚೆಲ್‍ ಡೇವಿಡ್‍ ಅಭಿನಯದ ‘ಅನ್‍ಲಾಕ್‍ ರಾಘವ’ ಚಿತ್ರವು ಫೆಬ್ರವ...

ಸದ್ಯ ಓಟಿಟಿಯಲ್ಲಿ ‘UI’ ಇಲ್ಲ; ಸ್ಪಷ್ಟನೆ ಕೊಟ್ಟ ನಿರ್ಮಾಪಕರು

08-01-2025 ಬೆಂಗಳೂರು

ಉಪೇಂದ್ರ ಅಭಿನಯದ ಮತ್ತು ನಿರ್ದೇಶನದ ‘UI’ ಚಿತ್ರವು ಡಿಸೆಂಬರ್‍ 20ರಂದು ಬಿಡುಗಡೆಯಾಗಿ, ಚಿತ್ರಕ್ಕೆ ...

ಫೆಬ್ರವರಿ 7ರಂದು ‘ಗಜರಾಮ’ನಾಗಿ ಬರಲಿದ್ದಾರೆ ರಾಜವರ್ಧನ್‍

08-01-2025 ಬೆಂಗಳೂರು

ಕಳೆದ ವರ್ಷದ ಕೊನೆಯ ಶುಕ್ರವಾರದಂದು ರಾಜವರ್ಧನ್‍ ಅಭಿನಯದ ‘ಗಜರಾಮ’ ಚಿತ್ರವು ಬಿಡಗುಡೆಯಾಗಬೇಕಿತ್ತು. ...