Date: 18-11-2022
Location: ಬೆಂಗಳೂರು
ರಾಷ್ಟ್ರಕವಿ ಡಾ.ಜಿ.ಎಸ್.ಶಿವರುದ್ರಪ್ಪ ಅವರ ಹೆಸರಿನಲ್ಲಿ ನೀಡುವ 2022ನೇ ಸಾಲಿನ ಜಿ.ಎಸ್.ಎಸ್ ವಿಮರ್ಶಾ ಪ್ರಶಸ್ತಿಗಾಗಿ ವಿಮರ್ಶಕರಾದ ನಟರಾಜ್ ಹುಳಿಯಾರ್ ಮತ್ತು ಬಂಜಗೆರೆ ಜಯಪ್ರಕಾಶ್ ಅವರು ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 15,000 ರೂಪಾಯಿ ನಗದು ಬಹುಮಾನ ಹಾಗೂ ಪ್ರಶಸ್ತಿ ಗೌರವಗಳನ್ನು ಒಳಗೊಂಡಿದೆ.
‘ಜಿ.ಎಸ್.ಎಸ್ ವಿಶ್ವಸ್ಥ ಮಂಡಳಿ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ’ ಎಂದು ಪ್ರತಿಷ್ಠಾನದ ಅಧ್ಯಕರು ಎಸ್. ನಟರಾಜ ಬೂದಾಳು ಹಾಗೂ ಕಾರ್ಯದರ್ಶಿ ಬಸವರಾಜ ಕಲ್ಗುಡಿ ತಿಳಿಸಿದ್ದಾರೆ.
2021ನೇ ಸಾಲಿನಲ್ಲಿ ವಿಮರ್ಶಕರಾದ ಗುರುಲಿಂಗ ಕಾಪಸೆ ಹಾಗೂ ಎಚ್.ಎಸ್ ಶ್ರೀಮತಿ ಅವರು ಈ ಪ್ರಶಸ್ತಿಗೆ ಭಾಜನರಾಗಿದ್ದರು. ಡಾ. ಜಿ.ಎಸ್.ಶಿವರುದ್ರಪ್ಪ ಅವರ ಜನ್ಮದಿನ ಫೆ. 7, 2023ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಬಸವಕಲ್ಯಾಣ: "ಯೂರೋಪ್ ನಮಗೆ ಅರ್ಥವಾದಷ್ಟು ಯೂರೋಪಿಗೆ ನಾವು ಅರ್ಥವಾಗಿಲ್ಲ. ಕನ್ನಡ ಸಾಹಿತ್ಯ ಅನುವಾದಿಸುವ ಮೂಲಕ ಕನ...
ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರವು 2022, 2023 ಮತ್ತು 2024ನೇ ಸಾಲಿನ ಕನ್ನಡ ಪುಸ್ತಕ ಸೊಗಸು ಹಾಗೂ ಮುದ್ರಣ ಸೊಗಸ...
ಧಾರವಾಡ: ಸಕ್ಕರಿ ಬಾಳಾಚಾರ್ಯ (ಶಾಂತಕವಿ) ಟ್ರಸ್ಟ್, ಧಾರವಾಡ ಜಿ. ಬಿ. ಜೋಶಿ ಮೆಮೋರಿಯಲ್ ಟ್ರಸ್ಟ್, ಧಾರವಾಡ ಕುರ್ತಕೋಟಿ ...
©2025 Book Brahma Private Limited.