Date: 13-11-2024
Location: ಬೆಂಗಳೂರು
ಬೆಂಗಳೂರು: ರಾಷ್ಟ್ರೀಯ ವೇದವಿಜ್ಞಾನ ಸಂಸ್ಥೆ ಟ್ರಸ್ಟ್ ವತಿಯಿಂದ ಪೂರ್ಣಪ್ರಜ್ಞ ವಿದ್ಯಾಪೀಠ ಹತ್ತಿರದ ಐಟಿಐ ಬಡಾವಣೆಯಲ್ಲಿರುವ ಶ್ರೀಕೃಷ್ಣ ಸಮೂಹ ವಿದ್ಯಾ ಸಂಸ್ಥೆಯಲ್ಲಿ ನವೆಂಬರ್ 17ರಿಂದ 18ರವರೆಗೆ ಆರನೇ ಅಖಿಲ ಭಾರತ ಹರಿದಾಸ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ.
ಎರಡು ದಿನದ ಈ ಸಮ್ಮೇಳನದಲ್ಲಿ ವಿವಿಧ ಅಧಿವೇಶನಗಳು ನಡೆಯಲಿವೆ. ಬಾಳಗಾರು ಮಠದ ಅಶೋಭರಾಮಪ್ರಿಯತೀರ್ಥ ಸ್ವಾಮೀಜಿ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ರಾಷ್ಟ್ರೀಯ ವೇದವಿಜ್ಞಾನ ಸಂಸ್ಥೆ ಟ್ರಸ್ಟ್‌ನ ಉಪಾಧ್ಯಕ್ಷ ಅರಳುಮಲ್ಲಿಗೆ ಪಾರ್ಥಸಾರಥಿ ಅವರು ಸಮ್ಮೇಳನಾಧ್ಯಕ್ಷತೆಯನ್ನು ವಹಿಸಲಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾ- ಲಯದ ಕುಲಪತಿ ಡಿ.ವಿ. ಪರಮಶಿವಮೂರ್ತಿ, ಅಮೆರಿಕದ ಯೋಗ ಸಂಸ್ಕೃತಂ ವಿಶ್ವವಿದ್ಯಾಲಯದ ಕುಲಪತಿ ಬಿ. ವೆಂಕಟಕೃಷ್ಣ ಶಾಸ್ತ್ರಿ ಭಾಗವಹಿಸಲಿದ್ದಾರೆ, ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಟ್ರಸ್ಟ್‌ನ ಕಾರ್ಯದರ್ಶಿ ಎಚ್.ಬಿ.ಲಕ್ಷ್ಮೀ ನಾರಾಯಣ ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಪತ್ರಕರ್ತ ಎಸ್.ಕೆ. ಶೇಷಚಂದ್ರಿಕಾ ಮತ್ತು ಹರಿದಾಸ ಸಾಹಿತ್ಯಕ್ಕೆ ಸೇವೆ ಸಲ್ಲಿಸಿರುವ ಬಿ. ಸತ್ಯನಾರಾಯಣಚಾರ್ಯ, ಜಯಲಕ್ಷ್ಮಿ ಮಂಗಳಮೂರ್ತಿ, ಹ.ರಾ. ನಾಗರಾಜಾಚಾರ್ಯ ಸೇರಿದಂತೆ ಹಲವರಿಗೆ ಗೌರವ ಸಮರ್ಪಣೆ ನೆರವೇರಲಿದೆ ಎಂದು ತಿಳಿಸಿದರು.
ಬೆಂಗಳೂರು: ಬಿ.ಎಂ.ಶ್ರೀ ಪ್ರತಿಷ್ಠಾನದಲ್ಲಿ ಎಸ್. ವಿ. ಶ್ರೀನಿವಾಸರಾವ್ ಅವರು ಸ್ಥಾಪಿಸಲಾದ 2023ನೇ ಸಾಲಿನ ಸಾರಂಗ...
ಬೆಂಗಳೂರು: ಅಂಕಿತ ಪ್ರಕಾಶನದ ವತಿಯಿಂದ ಚಿತ್ರಸಮೂಹ ಸಹಯೋಗದಲ್ಲಿ ಸುಚಿತ್ರಾ ಫಿಲಂ ಸೊಸೈಟಿ ಹಾಗೂ ವಾರ್ತಾ ಮತ್ತು ಸಾರ್ವಜನ...
ಬೆಂಗಳೂರು: 'ವಿನಯ ಮತ್ತು ಅಧಿಕಾರ ಒಟ್ಟಿಗೆ ಹೋಗುವುದಿಲ್ಲ. ಅಧಿಕಾರ ಬಂದರೆ ಅಹಂಕಾರ ಒಟ್ಟೊಟ್ಟಿಗೆ ಬರುತ್ತದೆ. ಕೇಂದ...
©2024 Book Brahma Private Limited.