ಎಸ್.ಎಲ್.ಭೈರಪ್ಪ ಅವರಿಗೆ ‘ಶ್ರೀ ಚೆನ್ನರೇಣುಕ ಬಸವ ಪ್ರಶಸ್ತಿ’

Date: 16-09-2024

Location: ಬೆಂಗಳೂರು


ಬೀದರ್: ಹಾರಕೂಡ ಹಿರೇಮಠ ಸಂಸ್ಥಾನದ ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಶ್ರೀ ಚೆನ್ನ ರೇಣುಕ ಬಸವ ಪ್ರಶಸ್ತಿಗೆ ನಾಡಿನ ಹಿರಿಯ ಸಾಹಿತಿ ಡಾ.ಎಸ್. ಎಲ್.ಭೈರಪ್ಪ ಅವರು ಆಯ್ಕೆಯಾಗಿದ್ದಾರೆ.

ಶ್ರೀ ಮಠದಲ್ಲಿ ಅಕ್ಟೋಬರ್ 11ರಂದು ನಡೆಯಲಿರುವ ಶ್ರೀ ಗುರುಲಿಂಗ ಶಿವಾಚಾರ್ಯರ 55ನೇ ಪುಣ್ಯ ಸ್ಮರಣೋತ್ಸವ ಹಾಗೂ 38ನೇ ಅನುಭಾವ ಪ್ರಚಾರ ಉಪನ್ಯಾಸ ಮಾಲೆ ಕಾರ್ಯಕ್ರಮದಲ್ಲಿ ಡಾ.ಭೈರಪ್ಪ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಈ ಪ್ರಶಸ್ತಿಯು ಒಂದು ಲಕ್ಷ ರೂ.ನಗದು, ಎರಡು ತೊಲ ಚಿನ್ನದ ಪದಕ ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿರುತ್ತದೆ ಎಂದು ಹಾರಕೂಡನ ಶ್ರೀ ಮಠದ ಪೀಠಾಧಿಪತಿ ಡಾ. ಚನ್ನವೀರ ಶಿವಾಚಾರ್ಯರು ತಿಳಿಸಿದ್ದಾರೆ.
"ಈ ಕಾದಂಬರಿಯಲ್ಲಿ ನನ್ನ ಮನಸ್ಸಿಗೆ ತೀರಾ ಹತ್ತಿರವಾದ ಸಾಲು "ರೂಪವೋ ಗುಣವೋ ಸಂಸ್ಕಾರವೋ ಬುದ್ಧಿಯೋ ರಕ್ತಸಂಬಧವನ್ನಾಧರಿಸಿ ಹರಿಯಬಹುದು. ಆದರೆ ಪ್ರೀತಿ ಹರಿಯುವುದಕ್ಕೆ ಯಾವ ಸಂಬಂಧವೂ ಬೇಡ".... ಎಷ್ಟು ಸತ್ಯ ಅಲ್ವಾ...ಅಷ್ಟಿಲ್ಲದೆ ನಮ್ಮ ಹೆಚ್.ಎಸ್.ವಿ. ಹೇಳುತ್ತಿದ್ದರೇ..."ತಡೆಯುವರಿಲ್ಲಾ...ಪಾತ್ರವಿರದ ತೊರೆ ಪ್ರೀತಿ" !," ಎನ್ನುತ್ತಾರೆ ನಾಗೇಂದ್ರ ಎ.ಆರ್. ಅವರು ಗಜಾನನ ಶರ್ಮಾ ಅವರ ‘ಚೆನ್ನಭೈರಾದೇವಿ’ ಕೃತಿ ಕುರಿತು ಬರೆದ ಅನಿಸಿಕೆ.

MORE NEWS

ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ನಡೆಯುವ ಮೂರು ದಿನಗಳ ಕಮ್ಮಟ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

19-09-2024 ಬೆಂಗಳೂರು

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೋಟಗೋಡಿ, ಹಾವೇರಿ ಜಿಲ್ಲೆ ಇವರ ಸಹಯೋಗದಲ್ಲ...

ದಲಿತ ಬಂಡಾಯದ ಜೊತೆಗೆ ಮಹಿಳಾ ಎಂದು ಸೇರಿಸಬೇಕು; ಲಲಿತಾ ಸಿದ್ಧಬಸವಯ್ಯ

19-09-2024 ಬೆಂಗಳೂರು

ಬೆಂಗಳೂರು: ಕ್ರೈಸ್ಟ್ ಕಾಲೇಜಿನ ಕನ್ನಡ ಸಂಘ ಕನ್ನಡ ಸಂಘದ ಸುವರ್ಣ ಮಹೋತ್ಸವ 2024ರ ಅಂಗವಾಗಿ ಏರ್ಪಡಿಸಿದ್ದ ಎರಡು ದಿನಗಳ ...

ಸಮಕಾಲೀನ ಸಾಮಾಜಿಕ ವಿಚಾರಗಳನ್ನು ಕುರಿತ ಮೂರು ದಿನಗಳ "ವಿಚಾರ ಕಮ್ಮಟ" ಸಂವಾದ ಕಾರ್ಯಾಗಾರ

17-09-2024 ಬೆಂಗಳೂರು

ಬೆಂಗಳೂರು: ಕನ್ನಡದ ಖ್ಯಾತ ಕತೆಗಾರ ದಿವಂಗತ ಡಾ. ಬೆಸಗರಹಳ್ಳಿ ರಾಮಣ್ಣ ಅವರ ಸ್ಮರಣಾರ್ಥವಾಗಿ ಆರಂಭವಾಗಿರುವ ಡಾ. ಬೆಸಗರಹಳ...