‘ಸಂಗೀತ ವಿದ್ವಾನ್ ಪ್ರಶಸ್ತಿ’ಗೆ ಬಸವರಾಜ್ ಭಜಂತ್ರಿ ಆಯ್ಕೆ

Date: 03-10-2024

Location: ಬೆಂಗಳೂರು


ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಸಂದರ್ಭದಲ್ಲಿ ಪ್ರತಿ ವರ್ಷ ರಾಜ್ಯ ಸಕಾರದಿಂದ ಕೊಡಮಾಡಲಾಗುವ 2024-25ನೇ ಸಾಲಿನ ‘ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ’ ಗೆ ಹಾವೇರಿ ಜಿಲ್ಲೆಯ ಖ್ಯಾತ ಶಹನಾಯಿ ವಾದಕ ಪಂಡಿತ್ ಬಸವರಾಜ್ ಭಜಂತ್ರಿ ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿಯು 5 ಲಕ್ಷ ರೂಪಾಯಿ ನಗದು, ಸರಸ್ವತಿ ವಿಗ್ರಹ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದ್ದು, ಅ. 3, 2024ರಂದು ಸಂಜೆ ಮೈಸೂರು ಅರಮನೆ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪ್ರತಿಷ್ಠಿತ ʼಸಂಗೀತ ವಿದ್ವಾನ್ʼ ಪ್ರಶಸ್ತಿಯನ್ನು ಪಂಡಿತ್ ಬಸವರಾಜ ಭಜಂತ್ರಿ ಅವರಿಗೆ ಪ್ರದಾನ ಮಾಡಲಿದ್ದಾರೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್. ತಂಗಡಗಿ ತಿಳಿಸಿದ್ದಾರೆ.

MORE NEWS

ಮೈಸೂರು ಅಂದರೆ ದಸರಾ, ದಸರಾ ಅಂದರೆ ಮೈಸೂರು: ಹಂಪ ನಾಗರಾಜಯ್ಯ

03-10-2024 ಬೆಂಗಳೂರು

ಮೈಸೂರು: ನಾಡ ಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಇಂದು ಉದ್ಘಾಟನೆ ಮಾಡಲಾಯಿತು. ಬೆಳಗ್ಗೆ 9:15 ರಿಂದ 9:40ರ ಶುಭ ವೃಶ್ಚ...

ನ್ಯಾಯಾಂಗ ಕ್ಷೇತ್ರದಲ್ಲಿ ಬರೆದಿರುವ ಬಹಳ ಅಪರೂಪದ ಬರವಣಿಗೆಯಿದು; ಮಲ್ಲೇಪುರಂ

02-10-2024 ಬೆಂಗಳೂರು

ಬೆಂಗಳೂರು: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಬುಕ್‌ ಡಿಪೋ ಮತ್ತು ಪ್ರಕ...

ಪರೋಪಕಾರ ಗುಣ ಇಲ್ಲದ ವ್ಯಕ್ತಿ ಸಮಾಜದಲ್ಲಿ ಉನ್ನತ ವ್ಯಕ್ತಿಯಾಗಲು ಸಾಧ್ಯವಿಲ್ಲ; ಶ್ರೀನಾಥ್​ ಜೋಶಿ

02-10-2024 ಬೆಂಗಳೂರು

ಬೆಂಗಳೂರು: ಭಾರತ ಭೋಗ ಭೂಮಿಯಲ್ಲ, ತ್ಯಾಗ ಭೂಮಿ. ಇಂತಹ ಪುಣ್ಯ ದೇಶದಲ್ಲಿ ನಾವು ಎಷ್ಟು ತ್ಯಾಗ ಮಾಡುತ್ತೇವೆಯೋ, ಅಷ್ಟು ಒಳ...