87ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಗೊ. ರು. ಚನ್ನಬಸಪ್ಪ ಆಯ್ಕೆ

Date: 20-11-2024

Location: ಬೆಂಗಳೂರು


ಬೆಂಗಳೂರು: ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಸಾಹಿತಿ, ಜಾನಪದ ವಿದ್ವಾಂಸ ಗೊ. ರು. ಚನ್ನಬಸಪ್ಪ(ಗೊ.ರು.ಚ.) ಅವರನ್ನು ಆಯ್ಕೆ ಮಾಡಲಾಗಿದೆ.

ಡಿಸೆಂಬರ್​ 20, 21 ಮತ್ತು 22 ಮೂರು ದಿನಗಳ ಕಾಲ ಸಾಹಿತ್ಯ ಸಮ್ಮೆಳನ ನಡೆಯಲಿದ್ದು, ಈ ನಿಟ್ಟಿನಲ್ಲಿ ಬುಧವಾರದಂದು ಮಧ್ಯಾಹ್ನ ಕನ್ನಡ ಸಾಹಿತ್ಯ ಪರಿಷತ್‌ ಕಾರ್ಯಕಾರಿ ಸಮಿತಿ ಸಮ್ಮೇಳನಾಧ್ಯಕ್ಷರ ಆಯ್ಕೆಗೆ ಸಭೆ ನಡೆಸಲಾಯಿತು. ಈ ವೇಳೆ ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ನಾಡೋಜ ಡಾ.‌ಮಹೇಶ್ ಜೋಶಿ ಅವರ ಅಧ್ಯಕ್ಷತೆಯಲ್ಲಿ ಸರ್ವಾನುಮತದಿಂದ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಗೊ. ರು. ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಲಾಯಿತು.

ಗೊ. ರು ಚನ್ನಬಸಪ್ಪ ಅವರ ಪರಿಚಯ: ಜಾನಪದ, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಗೊ. ರು. ಚನ್ನಬಸಪ್ಪರವರು ಚಿಕ್ಕಮಗಳೂರು ಜಿಲ್ಲೆಯ ಗೊಂಡೇದಹಳ್ಳಿಯಲ್ಲಿ ಜನಿಸಿದರು. ಗ್ರಾಮೀಣ ಬದುಕಿನ ಬಗ್ಗೆ ಮತ್ತು ಜಾನಪದ ಕ್ಷೇತ್ರವು ಅವರ ಆಸಕ್ತಿ ಕ್ಷೇತ್ರ. 1967ರಲ್ಲಿ ತರೀಕೆರೆಯಲ್ಲಿ ನಡೆದ ಜಾನಪದ ಸಮ್ಮೇಳನದ ಸಂದರ್ಭದಲ್ಲಿ ಹೊರತಂದ ಕೃತಿ ‘ಹೊನ್ನ ಬಿತ್ತೇವು ಹೊಲಕೆಲ್ಲ’ ಗ್ರಂಥದ ಸಂಪಾದಕರು. ಕೆ.ಆರ್. ಲಿಂಗಪ್ಪ ಅಭಿನಂದನಾ ಸಮಿತಿ ಪ್ರಕಟಿಸಿದ ‘ಗ್ರಾಮಜ್ಯೋತಿ’ ಇವೆರಡೂ ಕೃತಿಗಳೂ ಗೊ. ರು. ಚನ್ನಬಸಪ್ಪಅವರು ಸಂಪಾದಿಸಿ ವಿಶಿಷ್ಟ ಆಕರಗ್ರಂಥಗಳು. ಜಾನಪದ ವಸ್ತುವನ್ನಾಧರಿಸಿ ಬರೆದ ’ಸಾಕ್ಷಿ ಕಲ್ಲು, ಬೆಳ್ಳಕ್ಕಿ ಹಿಂಡು ಬೆದರ‍್ಯಾವೋ’ ರಂಗಭೂಮಿಯ ಮೇಲೆ ಅಪೂರ್ವ ಯಶಸ್ಸು ಕಂಡ ನಾಟಕಗಳು.’ವಿಭೂತಿ, ದಾಸೋಹ, ಸೇವಾ ಸಂಪದ’ ಮೊದಲಾದ ವಿಶಿಷ್ಟ ಕೃತಿರಚನೆ. ವಾರ್ತಾ ಇಲಾಖೆಯ ‘ಪಂಚಾಯತ್ ರಾಜ್ಯ’, ‘ಜನಪದ’ ಮಾಸಪತ್ರಿಕೆಗಳ ಸಹಾಯಕ ಸಂಪಾದಕರಾಗಿ ಪರಿಷತ್ ಪತ್ರಿಕೆ, ಜಾನಪದ ಜಗತ್ತು ಪತ್ರಿಕೆಗಳ ಸಂಪಾದಕರ ಜವಾಬ್ದಾರಿ. ಚಿತ್ರರಂಗದಲ್ಲೂ ಗಮನಾರ್ಹ ಸಾಧನೆ. ಕನ್ನಡ ಸಾಹಿತ್ಯ ಪರಿಷತ್ತು, ವಜ್ರಮಹೋತ್ಸವ, ಕರ್ನಾಟಕ ಜಾನಪದ ಕಲೆ, ಕನ್ನಡ ಪತ್ರಿಕೋದ್ಯಮ, ಸುತ್ತೂರ ಸಿರಿ, ಮೊದಲಾದ 40ಕ್ಕೂ ಹೆಚ್ಚು ಸಾಕ್ಷ್ಯ ಚಿತ್ರ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ನಾಡಿನಾದ್ಯಂತ ಪ್ರವಾಸ. ಸಾಹಿತ್ಯಾಭಿಮಾನಿಗಳಿಂದ ಏಳೆಂಟು ಲಕ್ಷರೂ ಸಂಗ್ರಹಣೆ. ಪರಿಷತ್ತಿನ ಸಿಬ್ಬಂದಿಯನ್ನು ಅನುದಾನದ ವ್ಯಾಪ್ತಿಗೆ ತಂದ ಕೀರ್ತಿ ಸಾಂಸ್ಕೃತಿಕ ಕಾರ‍್ಯಕ್ರಮ ಗೀತ-ಸಂಗೀತ, ಕಾವ್ಯ-ಕಾವೇರಿ ಪ್ರಾರಂಭಿಸಿದ ಹೆಗ್ಗಳಿಕೆ. ವಿದೇಶಿ ಕನ್ನಡಿಗರ ಆಹ್ವಾನದ ಮೇರೆಗೆ ಅಮೆರಿಕಾ ಭೇಟಿ. ಕರ್ನಾಟಕ ನಾಟಕ ಅಕಾಡಮಿ ಪ್ರಶಸ್ತಿ, ಕರ್ನಾಟಕದ ರಾಜ್ಯೋತ್ಸವ ಪ್ರಶಸ್ತಿ ಮುಂತಾದವು ಸಂದಿವೆ.

ಗೊ.ರು.ಚ ಅವರ ಕೃತಿಗಳ ಕುರಿತ ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ..

MORE NEWS

ವಿಜಯ ರಾಘವೇಂದ್ರ ನಟನೆಯ 'ರುದ್ರಾಭಿಷೇಕಂ' ಚಿತ್ರಕ್ಕೆ ಚಾಲನೆ

21-11-2024 ಬೆಂಗಳೂರು

ಬೆಂಗಳೂರು: ನಮ್ಮ‌ನಾಡಿನ ಸಾಂಸ್ಕೃತಿಕ ಇತಿಹಾಸ, ಆಚರಣೆಗಳು, ಕಲೆಯನ್ನು ಪ್ರತಿಬಿಂಬಿಸುವ ಒಂದಷ್ಟು ಚಲನಚಿತ್ರಗಳು ಈಗ...

ಅಂಬಾಬಾಯಿ ಕನ್ನಡದ ಅನರ್ಘ್ಯ ಮುತ್ತು; ಸತ್ಯವತಿ

19-11-2024 ಬೆಂಗಳೂರು

ಬೆಂಗಳೂರು: ಯಾಜಿ ಪ್ರಕಾಶನದಿಂದ ಹರಿದಾಸ ಮಹಿಳೆ ಅಂಬಾಬಾಯಿ ವಿರಚಿತ ‘ಏಕಾಂಗಿ ಕವಯತ್ರಿಯ ಪ್ರವಾಸದ ಡೈರಿ’ (...

ಸಿಂಗಪುರದಲ್ಲಿ ವಿಶ್ವ ಸಮ್ಮೇಳನ ಮಾಡಿದ್ದು ದೊಡ್ಡ ‘ಯಜ್ಞ’ ಎಂದೇ ಹೇಳಬಹುದು; ಸೋಮಶೇಖರ್

19-11-2024 ಬೆಂಗಳೂರು

ಬೆಂಗಳೂರು: ಕರ್ನಾಟಕ ಪ್ರೆಸ್‌ ಕ್ಲಬ್ ಕೌನ್ಸಿಲ್ ಅಂತಾರಾಷ್ಟ್ರೀಯ 2ನೇ ವಿಶ್ವ ಕನ್ನಡ ಹಬ್ಬದ ಸಲಹಾ ಸಮಿತಿ ವತಿಯಿಂದ...