Date: 22-12-2024
Location: ಮಂಡ್ಯ
ಮಂಡ್ಯ: ವಿದೇಶದಲ್ಲಿ 40 ಲಕ್ಷಕ್ಕೂ ಅಧಿಕ ಕನ್ನಡಿಗರಿದ್ದು ಅವರಲ್ಲಿ 5 ಲಕ್ಷಕ್ಕೂ ಅಧಿಕ ಕನ್ನಡಿಗರು ಅಮೆರಿಕಾದಲ್ಲೇ ಇದ್ದಾರೆ. ಅಕ್ಕ ಸಮೇಳನದ ಮೂಲಕ ವಿದೇಶದಲ್ಲಿ ಕನ್ನಡ ಕಟ್ಟುವ ಕೆಲಸ ಮಾಡಲಾಗುತ್ತಿದೆ ಎಂದು ಅಮೆರಿಕ ಕನ್ನಡ ಕೂಟ (ಅಕ್ಕ)ದ ಅಧ್ಯಕ್ಷ ಅಮರನಾಥ ಗೌಡ ಹೇಳಿದರು.
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆಯಲ್ಲಿ ನಡೆದ "ಜಾಗತಿಕ ನೆಲೆಯಲ್ಲಿ ಕನ್ನಡ ಕಟ್ಟುವ ಬಗೆ" ವಿಷಯದ ಬಗ್ಗೆ ನಡೆದ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಅಮರನಾಥ ಗೌಡ ಅವರು ಮಾತನಾಡಿದರು.
ವಿದೇಶದಲ್ಲಿ ಕನ್ನಡ ಕಟ್ಟುವುದು ಸವಾಲಿನ ಕೆಲಸ. ಆದರೂ ಕನ್ನಡತನವನ್ನು ಗಟ್ಟಿಗೊಳಿಸುವ ಕನ್ನಡದ ಲಿಪಿ ಉಳಿಸುವ ಕೆಲಸವನ್ನು ಮಾಡಲಾಗುತ್ತಿದೆ ಎಂದರು.
ಬಹರೇನ್‌ನ ಕಿರಣ್ ಉಪಾಧ್ಯಾಯ ಅವರು ಆಶಯ ನುಡಿಗಳನ್ನಾಡಿದರು. ವಿದೇಶದಲ್ಲಿರುವ ಕನ್ನಡಿಗರ ಸಮಸ್ಯೆಗಳು, ಪರಿಹಾರಗಳು ವಿಷಯದ ಬಗ್ಗೆ ಕತಾರ್ ನ ಎಚ್. ಕೆ. ಮಧು ಅವರು, ಜಗತ್ತಿನ ರಾಷ್ಟ್ರಗಳಲ್ಲಿ ಮಾತೃಭಾಷೆಯನ್ನು ನೋಡುವ ಕ್ರಮ ವಿಷಯದ ಬಗ್ಗೆ ಇಂಗ್ಲೆಂಡ್ ನ ಅಶ್ವಿನ್ ಶೇಷಾದ್ರಿ, ಹೊರನಾಡಿನಲ್ಲಿ ಕನ್ನಡದ ಅಸ್ತಿತ್ವ, ಸವಾಲುಗಳು ವಿಷಯದ ಬಗ್ಗೆ ಮಹಾರಾಷ್ಟ್ರದ ಕಮಲಾಕರ ಕಡವೆ, ವಿದೇಶದಲ್ಲಿರುವ ಕನ್ನಡ ಶಾಲೆಗಳ ಸ್ಥಿತಿಗತಿಗಳು ವಿಷಯದ ಬಗ್ಗೆ ಯುಎಇನ ಶಶಿಧರ ನಾಗರಾಜಪ್ಪ ಅವರು ವಿಷಯ ಮಂಡಿಸಿದರು.
ಗೋಷ್ಠಿಯಲ್ಲಿ ಕ. ಸಾ. ಪ ಅಂತರಾಷ್ಟ್ರೀಯ ಸಮನ್ವಯಾಧಿಕಾರಿ ನಿವೇದಿತ ಹಾವನೂರ - ಹೊನ್ನತ್ತಿ ಅವರು ವಿಶೇಷ ಉಪಸ್ಥಿತಿ ವಹಿಸಿದ್ದರು.
ಕನ್ನಡ ಸಾಹಿತ್ಯ ಪರಿಷತ್ತಿನ ಸಭೆಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಯಲ್ಲಿ ಆಯೋಜಿಸಲು ನಿರ...
ಮಂಡ್ಯ: 100 ವರ್ಷ ಪೂರೈಸಿದ ಶಾಲೆಗಳಿಗೆ ಆಟದ ಮೈದಾನ ಇತ್ತು. ಇಂದು ಅವು ಇಲ್ಲ. ಸ್ಥಳೀಯ ರಾಜಕಾಣಿಗಳ, ಪ್ರಭಾವಿಗಳ ...
ಮಂಡ್ಯ: ಮಳೆ ತೇವವನ್ನು ಹೊತ್ತಿಟ್ಟ ದಾರಿ, ಕಾಲುಜಾರಿ ಬಿದ್ದ ಪುಟಗಳ ಕಥೆಗಳಂತಿದ್ದವು. ಜನರು ಗಲುಬೆ ಗದ್ದಲಗಳ ನಡುವೆ ಪುಸ...
©2024 Book Brahma Private Limited.