Date: 02-01-2025
Location: ಬೆಂಗಳೂರು
ಕಳೆದ ವರ್ಷ ‘ಕರಟಕ ದಮನಕ’ ಚಿತ್ರದಲ್ಲಿ ಕಾಣಿಸಿಕೊಂಡು ಮರೆಯಾಗಿದ್ದ ಬಹುಭಾಷಾ ನಟಿ ಪ್ರಿಯಾ ಆನಂದ್, ಇದೀಗ ‘ಬಲರಾಮನ ದಿನಗಳು’ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರೆ.
‘ಆ ದಿನಗಳು’ ಖ್ಯಾತಿಯ ಕೆ.ಎಂ. ಚೈತನ್ಯ ನಿರ್ದೇಶನದಲ್ಲಿ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ ಚಿತ್ರ ‘ಬಲರಾಮನ ದಿನಗಳು’. ಇದು ವಿನೋದ್ ಪ್ರಭಾಕರ್ ಅಭಿನಯದ 25ನೇ ಚಿತ್ರವೂ ಹೌದು. ಈಗಾಗಲೇ ಚಿತ್ರಕ್ಕೆ ಎರಡು ಹಂತಗಳ ಚಿತ್ರೀಕರಣ ಮುಕ್ತಾಯವಾಗಿದ್ದು, ಜನವರಿ 15 ರಿಂದ ಮೂರನೇ ಹಂತದ ಚಿತ್ರೀಕರಣ ಆರಂಭವಾಗಲಿದೆ.
ಹೀಗಿರುವಾಗಲೇ, ಚಿತ್ರಕ್ಕೆ ಇದೀಗ ಪ್ರಿಯಾ ಆನಂದ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಹೊಸವರ್ಷದ ಆರಂಭದ ದಿನ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ನಾಯಕಿ ಪ್ರಿಯಾ ಆನಂದ್ ಅವರಿಗೆ ಚಿತ್ರತಂಡ ಸ್ವಾಗತ ಹೇಳಿದೆ. ಈ ಚಿತ್ರದಲ್ಲಿ ಅವರ ಪಾತ್ರ, ಹೆಸರು ಏನು ಮುಂತಾದ ವಿಷಯಗಳನ್ನು ಚಿತ್ರತಂಡ ಇನ್ನೂ ಬಹಿರಂಗಪಡಿಸಿಲ್ಲ. ಸದ್ಯಕ್ಕೆ ಈ ಚಿತ್ರದಲ್ಲಿ ಅವರು ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿರುವುದನ್ನು ಮಾತ್ರ ಘೋಷಿಸಲಾಗಿದೆ.
ಇದು ಪ್ರಿಯಾ ಅಭಿನಯದ ಐದನೇ ಕನ್ನಡ ಚಿತ್ರ. ಇದಕ್ಕೂ ಮೊದಲು ಅವರು ‘ರಾಜ್‍ಕುಮಾರ’, ‘ಯುವರತ್ನ’, ‘ಆರೆಂಜ್’ ಮತ್ತು ‘ಕರಟಕ ದಮನಕ’ ಚಿತ್ರಗಳಲ್ಲಿ ನಟಿಸಿದ್ದರು. ಇದೇ ಮೊದಲ ಬಾರಿಗೆ ಅವರು ಕನ್ನಡದಲ್ಲಿ ರೆಟ್ರೋ ಚಿತ್ರವೊಂದರಲ್ಲಿ ಅಭಿನಯಿಸುತ್ತಿದ್ದಾರೆ. ‘ಬಲರಾಮನ ದಿನಗಳು’ 1980ರ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದೆ. ಇತ್ತೀಚೆಗಷ್ಟೇ ವಿನೋದ್ ಪ್ರಭಾಕರ್ ಅವರ ಹುಟ್ಟುಹಬ್ಬಕ್ಕೆ ಅವರ ಮೊದಲ ನೋಟ ಬಿಡುಗಡೆಯಾಗಿತ್ತು.
‘ಕಬಾಲಿ’, ‘ಕಾಲ’, ‘ಕಲ್ಕಿ 2898 AD’ ಮುಂತಾದ ಚಿತ್ರಗಳಿಗೆ ಸಂಗೀತ ಸಂಯೋಜಕರಾದ ದಕ್ಷಿಣ ಭಾರತದ ಜನಪ್ರಿಯ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಈ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದಾರೆ. ಇದು 51ನೇ ಚಿತ್ರವಾಗಿದ್ದು, ಕನ್ನಡದಲ್ಲಿ ಮೊದಲ ಚಿತ್ರವಾಗಿದೆ. ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಕಳೆದ ವರ್ಷ ದಸರಾ ಸಂದರ್ಭದಲ್ಲಿ ಚಿತ್ರ ಬಿಡುಗಡೆ ಮಾಡುವುದಾಗಿ ಹೇಳಿದ್ದರು ನಿರ್ದೇಶಕ ವಿಜಯಪ್ರಸಾದ್. ಆದರೆ, ಅವರು ...
ಬೆಂಗಳೂರು: ನಾಟಕಕಾರ, ಚಿತ್ರಕಲಾವಿದ ಡಾ.ಡಿ.ಎಸ್. ಚೌಗಲೆ ಅವರ ‘ಸದರಬಜಾರ್’(ಕಾದಂಬರಿ) ಹಾಗೂ ‘ವಾರಸ...
ಮಂಗಳೂರು: ಲೇಖಕ ರಾಜಾರಾಂ ತಲ್ಲೂರು ಅವರ ‘ಪಿಟ್ಕಾಯಣ’ ಅಂಕಣ ಬರಹಗಳ ಕೃತಿಯು 2025 ಜ. 04 ಶುಕ್ರವಾರದಂದು ಮ...
©2025 Book Brahma Private Limited.