Date: 13-12-2024
Location: ಬೆಂಗಳೂರು
ದಾವಣಗೆರೆ: ಭಾರತದ ಬಹುದೊಡ್ಡ ಪುಸ್ತಕ ಭಂಡಾರ 'ಸಪ್ನ ಬುಕ್ ಹೌಸ್' ನ 23ನೆಯ ಶಾಖೆಯನ್ನು ದಾವಣಗೆರೆಯಲ್ಲಿ 2024 ಡಿ. 13 ಶುಕ್ರವಾರದಂದು ತೆರೆಯಲಾಯಿತು.
ಶಾಖೆಯ ಉದ್ಘಾಟನಾ ಕಾರ್ಯಕ್ರಮವನ್ನು ಶ್ರೀ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ನೆರವೇರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಸಿದ್ಧ ವಿದ್ವಾಂಸ ನಾಡೋಜ ಪ್ರೊ. ಹಂಪ ನಾಗರಾಜಯ್ಯ ಅವರು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಡಿ. ಕುಂಬಾರ, ದಾವಣಗೆರೆಯ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ, ಜಿಲ್ಲಾ ಕ.ಸಾ ಪರಿಷತ್ತು ಅಧ್ಯಕ್ಷ ಬಿ. ವಾಮದೇವಪ್ಪ ಉಪಸ್ಥಿತರಿದ್ದರು.
ದೀಪಾರಾಧನೆಯನ್ನು ದಾವಣಗೆರೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರು ನೆರವೇರಿಸಿದರು.
ಮಂಡ್ಯ: ವಿದೇಶದಲ್ಲಿ 40 ಲಕ್ಷಕ್ಕೂ ಅಧಿಕ ಕನ್ನಡಿಗರಿದ್ದು ಅವರಲ್ಲಿ 5 ಲಕ್ಷಕ್ಕೂ ಅಧಿಕ ಕನ್ನಡಿಗರು ಅಮೆರಿಕಾದಲ್ಲೇ ಇದ್ದ...
ಕನ್ನಡ ಸಾಹಿತ್ಯ ಪರಿಷತ್ತಿನ ಸಭೆಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಯಲ್ಲಿ ಆಯೋಜಿಸಲು ನಿರ...
ಮಂಡ್ಯ: 100 ವರ್ಷ ಪೂರೈಸಿದ ಶಾಲೆಗಳಿಗೆ ಆಟದ ಮೈದಾನ ಇತ್ತು. ಇಂದು ಅವು ಇಲ್ಲ. ಸ್ಥಳೀಯ ರಾಜಕಾಣಿಗಳ, ಪ್ರಭಾವಿಗಳ ...
©2024 Book Brahma Private Limited.