Date: 18-11-2024
Location: ಬೆಂಗಳೂರು
ಬೆಂಗಳೂರು: ನಗರದ ಬಹುದೊಡ್ಡ ಸಾಹಿತ್ಯ ಕಾರ್ಯಕ್ರಮಗಳಲ್ಲಿ ಒಂದಾಗಿರುವ ಬೆಂಗಳೂರು ಸಾಹಿತ್ಯ ಉತ್ಸವದ 13ನೇ ಆವೃತ್ತಿಯು ಡಿ.14 ಮತ್ತು 15ರಂದು ಕುಮಾರಕೃಪಾ ರಸ್ತೆಯಲ್ಲಿರುವ ಲಲಿತ್ ಅಶೋಕ್ ಹೋಟೆಲ್‌ನಲ್ಲಿ ನಡೆಯಲಿದೆ.
ಎರಡು ದಿನಗಳ ಉತ್ಸವದಲ್ಲಿ ಸಾಹಿತ್ಯ, ಸಂಸ್ಕೃತಿ, ಇತಿಹಾಸ, ಕಲೆ, ಸಂಗೀತ, ಸಿನಿಮಾ, ಕ್ರೀಡೆ ಸೇರಿದಂತೆ ವೈವಿಧ್ಯಮಯ ವಿಷಯಗಳ ಬಗ್ಗೆ ಗೋಷ್ಠಿಗಳು ನಡೆಯಲಿವೆ.
ಹಲವು ವೇದಿಕೆಗಳಲ್ಲಿ ಬೆಳಗ್ಗೆ 9.00 ರಿಂದ ಸಂಜೆ 7.30ರವರೆಗೆ ವಿವಿಧ ಗೋಷ್ಠಿಗಳು ನಡೆಯಲಿದ್ದು, ಗೋಷ್ಠಿ ಯಲ್ಲಿ ವಿವಿಧ ಕ್ಷೇತ್ರಗಳ ದೇಶ–ವಿದೇಶಗಳ ಚಿಂತಕರು, ಸಾಹಿತಿಗಳು ಪಾಲ್ಗೊಳ್ಳಲಿದ್ದಾರೆ. ಉತ್ಸವದಲ್ಲಿ ಅರ್ಥಪೂರ್ಣ ಸಂವಾದ, ಆರೋಗ್ಯಕರ ಚರ್ಚೆಗಳು ನಡೆಯಲಿವೆ.
ಈಗಾಗಲೇ ಬೆಂಗಳೂರು ಲಿಟ್ ಫೆಸ್ಟ್ ವೆಬ್ ಸೈಟ್ ನಲ್ಲಿ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತರು ಈ ಕೆಳಗೆ ನೀಡಲಾಗಿರುವ ವೆಬ್ ಸೈಟ್ ಲಿಂಕ್ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.
https://bangaloreliteraturefestival.org/
ಬೆಂಗಳೂರು: ಪಿ. ಶೇಷಾದ್ರಿ ಸಿನಿಮಾವಲೋಕನ, ಚಿತ್ರೋತ್ಸವ, ಸಿನಿಮಂಥನ 'ಮುನ್ನುಡಿ' ಚಿತ್ರದಿಂದ ಆರಂಭಗೊಂಡಿದೆ. ಹ...
ಬೆಂಗಳೂರು: ನಮ್ಮನಾಡಿನ ಸಾಂಸ್ಕೃತಿಕ ಇತಿಹಾಸ, ಆಚರಣೆಗಳು, ಕಲೆಯನ್ನು ಪ್ರತಿಬಿಂಬಿಸುವ ಒಂದಷ್ಟು ಚಲನಚಿತ್ರಗಳು ಈಗ...
ಬೆಂಗಳೂರು: ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ...
©2024 Book Brahma Private Limited.